top of page

ಬೆಂಗಳೂರಿಗೂ ಕಾಲಿಟ್ಟ ಡೆಡ್ಲಿ HMPV ವೈರಸ್

Writer: Ananthamurthy m Hegde
Ananthamurthy m Hegde
Jan 6, 2025
1 min read

ನವದೆಹಲಿ/ ಬೆಂಗಳೂರು: ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿದೆ.

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ದೃಢಪಡಿಸಿದೆ. 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರೆ 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಐಸಿಎಂಆರ್‌, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ICMR ನ ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ. HMPV ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು, ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.

HMPV ಒಂದು ಉಸಿರಾಟದ ವೈರಸ್ ಆಗಿದ್ದು ಅದು ಸಾಮಾನ್ಯವಾಗಿ ಶೀತವನ್ನು ಹೋಲುವ ಸೌಮ್ಯ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ ಮಕ್ಕಳು, ಹಿರಿಯರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಂದಿಗೆ ಬೇಗ ಹರಡಬಹುದು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ಹೆಚ್ಚಿನ ಪರೀಕ್ಷೆಗೆ ಮಕ್ಕಳ ಸ್ವಾಬ್‌ ಅನ್ನು ಪುಣೆ ಲ್ಯಾಬ್‌ಗೆ ಕಳುಹಿಸುವ ಬಗ್ಗೆ ಚರ್ಚೆಮಾಡುತ್ತೇವೆ. ಐಸಿಎಂಆರ್, ಕೇಂದ್ರ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡುತ್ತೇವೆ. ಎಲ್ಲಾ ಕಡೆ ಟೆಸ್ಟ್ ಮಾಡಿದರೂ ಮಕ್ಕಳು, ವಯಸ್ಸಾದವರಲ್ಲೂ ಸಿಗಬಹುದು. ಹೀಗಾಗಿ ಎಚ್ಚರಿಕೆ ಅಗತ್ಯ, ಈ ಸಂಬಂಧ ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದೇವೆ ಎಂದು ತಿಳಿಸಿದರು.

Comments


Top Stories

1/322
bottom of page