top of page

ವಿಶ್ವ ವಿಖ್ಯಾತ ಜೋಗ ಜಲಪಾತಕ್ಕಿಲ್ಲ ವ್ಯವಸ್ಥಿತ ರಸ್ತೆ

  • Writer: Ananthamurthy m Hegde
    Ananthamurthy m Hegde
  • 13h
  • 1 min read

ಸಿದ್ದಾಪುರ: ಸಿದ್ದಾಪುರದಿಂದ ವಿಶ್ವ ಪ್ರಸಿದ್ಧ ಜೋಗ ಜಲಪಾತಕ್ಕೆ ಸಂಪರ್ಕ ನೀಡುವ ಮುಖ್ಯ ರಸ್ತೆಯಲ್ಲಿ ಬೃಹದಾಕಾರದ ಹೊಂಡಗಳು ಬಾವಿ ಆಕಾರದಲ್ಲಿ ನಿರ್ಮಾಣವಾಗಿದ್ದು ವಾಹನ ಸವಾರರು ಸಂಚಾರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಕತ್ತಿ ಬಳಿ ಹೊಂಡ ಗುಂಡಿಗಳು ಬಾಯಿ ತೆರೆದು ನಿಂತಿದ್ದು ಸಣ್ಣಪುಟ್ಟ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ.

ವಾರಾಂತ್ಯದಲ್ಲಿ ಅತಿ ಹೆಚ್ಚು ವಾಹನಗಳು ಸಂಚರಿಸುವುದರಿಂದ ಮತ್ತಷ್ಟು ಹದಗೆಡುತ್ತದೆ ಕೂಡಲೇ ಸಂಬಂಧಪಟ್ಟ ಇಲಾಖೆ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎನ್ನುವ ಒತ್ತಾಯ ವಾಹನ ಸವಾರರು ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಈ ಪ್ರಮಾಣದಲ್ಲಿ ಹೊಂಡ ಗುಂಡಿಗಳು ಬಾವಿಯ ಆಕಾರದಲ್ಲಿ ನಿರ್ಮಾಣವಾದರೂ ಕೂಡ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು, ಜನಪ್ರತಿನಿದಿನಗಳು ಯಾವುದೇ ಕ್ರಮ ಕೈಗೊಳ್ಳದೆ ದಿವ್ಯ ನಿರ್ಲಕ್ಷ ವಹಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Comments


Top Stories

bottom of page