top of page

ಯಲ್ಲಾಪುರದಲ್ಲಿ ನಾರಾಯಣ ಗುರುಗಳ ಜಯಂತಿ ಆಚರಣೆ

  • Writer: Ananthamurthy m Hegde
    Ananthamurthy m Hegde
  • 1 day ago
  • 1 min read

ಯಲ್ಲಾಪುರ: ಸಮಾಜದಲ್ಲಿ ರೂಢಿಯಲ್ಲಿದ್ದ ಹಲವು ಅನಿಷ್ಠ ಪದ್ದತಿಗಳನ್ನು ಹೋಗಲಾಡಿಸಲು ಬ್ರಹ್ಮಶ್ರೀ ನಾರಾಯಣ ಗುರುಗಳು ಶ್ರಮಿಸಿದ್ದರು ಎಂದು ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ ಹೇಳಿದರು.



ಅವರು ರವಿವಾರ ಪಟ್ಟಣದ ಕಾಳಮ್ಮನಗರದ ಕಾಳಮ್ಮದೇವಿ ದೇವಾಲಯದ ಸಭಾಭವನದಲ್ಲಿ ತಾಲೂಕು ಅಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗುರುಗಳು ಹಾಕಿಕೊಟ್ಟ ಆದರ್ಶಗಳು ಅನುಕರಣೀಯ. ಅವುಗಳನ್ನು ಅಳವಡಿಸಿಕೊಳ್ಳುವ ಮೂಲಕ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದರು.

ಶಿಕ್ಷಕ ರಾಮಚಂದ್ರ ನಾಯ್ಕ ಉಪನ್ಯಾಸ ನೀಡಿ, 'ಶ್ರೀನಾರಾಯಣ ಗುರುಗಳು ಕೇವಲ ನಾಮಧಾರಿ ಸಮಾಜಕ್ಕೆ ಮಾತ್ರ ಸೀಮಿತರಲ್ಲ, ಇಡೀ ಲೋಕಕ್ಕೆ ಗುರುಗಳು. ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು' ಎಂದರು.

ಗ್ರೇಡ್ 2 ತಹಸೀಲ್ದಾರ ಸಿ ಜಿ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಸಾಧನೆ ಮಾಡಿದ ನಾಮಧಾರಿ ಸಮುದಾಯದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ನರಸಿಂಹ ನಾಯ್ಕ, ಪಪಂ ಸದಸ್ಯ ಸತೀಶ ನಾಯ್ಕ, ಶಿಕ್ಷಣ ಸಂಯೋಜಕ ಪ್ರಶಾಂತ ಜಿ ಎನ್, ನಾಮಧಾರಿ ಸಮಾಜದ ಮುಖಂಡರಾದ ನವೀನ್ ನಾಯ್ಕ ಭಾಗವಹಿಸಿದ್ದರು.

Comments


Top Stories

bottom of page