top of page

ಹೊಸ ವರ್ಷಕ್ಕೆ ಹೊಸ ಅವಕಾಶಗಳು ಬರಲಿ : ಮೋದಿ ಶುಭಾಶಯ

  • Writer: Ananthamurthy m Hegde
    Ananthamurthy m Hegde
  • Jan 1
  • 1 min read

ಹೊಸದಿಲ್ಲಿ: ದೇಶಾದ್ಯಂತ 2025ರ ಹೊಸ ವರ್ಷದ ಸಂಭ್ರಮಾಚರಣೆ ಮನೆ ಮಾಡಿದ್ದು, ಜನತೆ ಅತ್ಯಂತ ಅದ್ದೂರಿಯಿಂದ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಈ ಮಧ್ಯೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದು, ನೂತನ ವರ್ಷವೂ ಎಲ್ಲರಿಗೂ ಹೊಸ ಅವಕಾಶಗಳ ಬಾಗಿಲನ್ನು ತೆರೆಯಲಿ ಎಂದು ಶುಭ ಹಾರೈಸಿದ್ದಾರೆ.

ree

 ತಮ್ಮ ಅಧಿಕೃತ 'ಎಕ್ಸ್‌' ಅಕೌಂಟ್‌ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರುವುದಾಗಿ ಹೇಳಿದ್ದಾರೆ. ಹೊಸ ವರ್ಷದಲ್ಲಿ ಭಾರತದ ಅಭಿವೃದ್ಧಿಯ ನಾಗಾಲೋಟ ಮತ್ತಷ್ಟು ವೇಗ ಪಡೆದುಕೊಳ್ಳಲಿ ಎಂದು ಪ್ರಧಾನಿ ಮೋದಿ ಇದೇ ವೇಳೆ ಪ್ರಾರ್ಥಿಸಿದ್ದಾರೆ.

"ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷವು ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಆಶೀರ್ವದಿಸಲಿ” ಎಂದು ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ.

"ಭಾರತ ಈಗ ಜಗತ್ತಿಗೆ ಮಾರ್ಗದರ್ಶನ ಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಜಾಗತಿಕ ಒಳಿತಿಗಾಗಿ ತನ್ನೆಲ್ಲಾ ಶಕ್ತಿ-ಸಾಮರ್ಥ್ಯವನ್ನು ಧಾರೆ ಎರೆಯಲಿದೆ. ಹೊಸ ವರ್ಷದಲ್ಲಿ ನಮ್ಮ ಸಾಮೂಹಿಕ ಪ್ರಯತ್ನಗಳು ದೇಶವನ್ನು ಮತ್ತಷ್ಟು ಸದೃಢಗೊಳಿಸಲಿದೆ ಎಂಬ ವಿಶ್ವಾಸ ನನ್ನಲ್ಲಿದೆ" ಎಂದು ಪ್ರಧಾನಿ ಮೋದಿ ನುಡಿದಿದ್ದಾರೆ.

ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದು, "ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯ ಹೊಸ ವರ್ಷ ನಮ್ಮದಾಗಲಿ" ಎಂದು ಪ್ರಾರ್ಥಿಸಿದ್ದಾರೆ.

"ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ಈ ಹೊಸ ವರ್ಷ ಎಲ್ಲರ ಜೀವನದಲ್ಲೂ ಹೊಸ ಭರವಸೆಯನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯ ಹೊಸ ವರ್ಷ ನಮ್ಮದಾಗಲಿದ್ದು, ಭಾರತವೂ ಸೇರಿದಂತೆ ಜಾಗತಿಕ ಒಳಿತಿಗಾಗಿ ನಾವೆಲ್ಲರೂ ಸೇರಿ ಕೆಲಸ ಮಾಡೋಣ" ಎಂದು ದ್ರೌಪದಿ ಮುರ್ಮು ಕರೆ ನೀಡಿದ್ದಾರೆ.

ಇನ್ನುಳಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದು, ಹೊಸ ವರ್ಷದಲ್ಲಿ ಎಲ್ಲರ ಜೀವನ ಉತ್ತಮವಾಗಿರಲಿ ಎಂದು ಪ್ರಾರ್ಥಿಸಿದ್ದಾರೆ. ಹೊಸ ವರ್ಷದಲ್ಲಿ ದೇಶವು ಮತ್ತಷ್ಟು ದೃಢತೆಯೊಂದಿಗೆ ಒಂದಾಗಿ ಹೆಜ್ಜೆ ಹಾಕಲಿದೆ ಎಂಬ ಭರವಸೆ ಇರುವುದಾಗಿಯೂ ಅಮಿತ್‌ ಶಾ ಹೇಳಿದ್ದಾರೆ. ಒಟ್ಟಿನಲ್ಲಿಹೊಸ ವರ್ಷದಲ್ಲಿ ಗಣ್ಯರ ಶುಭ ಹಾರೈಕೆ ಸಂಭ್ರಮಾಚರಣೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಬಹುದು

Comments


Top Stories

bottom of page