SSLC ಪ್ರಶ್ನೆ ಪತ್ರಿಕೆ ಸೋರಿಕೆ
- Ananthamurthy m Hegde
- Mar 4
- 1 min read

ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ವಿಜ್ಞಾನ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಪರೀಕ್ಷೆ ಮೊದಲೆ ಸೋರಿಕೆ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ವಿಜ್ಞಾನ ವಿಷಯದ ಭೌತಶಾಸ್ತ್ರ ವಿಭಾಗದ ಸಂಬಂಧಿತ ಪ್ರಶ್ನೆ ಪತ್ರಿಕೆ ಯೂಟ್ಯೂಬ್ ಚಾನಲ್ ಗಳಲ್ಲಿ
ಪರೀಕ್ಷೆ ಆರಂಭಕ್ಕೆ 18 ಗಂಟೆಗಳ ಮೊದಲೇ ಹರಿದಾಡುತ್ತಿದೆ. ಸೋಮವಾರ ನಡೆದ ಪರೀಕ್ಷೆಯಲ್ಲಿ ಸೋರಿಕೆಯಾಗಿರುವ ಪ್ರಶ್ನೆ ಪತ್ರಿಕೆಯೇ ಬಂದಿದೆ.
ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಆದ ಪ್ರಶ್ನೆ ಪತ್ರಿಕೆ
ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಜೆರಾಕ್ಸ್ ಮಾಡಿ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ವಿಜ್ಞಾನ ಪ್ರಶ್ನೆ ಪತ್ರಿಕೆಯನ್ನು 'ಬ್ರೇನ್ ಸ್ಟೇಷನ್' ಎಂಬ ಯೂಟ್ಯೂಬ್ ಚಾನಲ್ ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಈ ವಿಡಿಯೋವನ್ನು ಈಗಾಗಲೇ 27,221 ಜನರು ವೀಕ್ಷಿಸಿದ್ದಾರೆ.















Comments