top of page

ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ

  • Writer: Ananthamurthy m Hegde
    Ananthamurthy m Hegde
  • Jan 1
  • 1 min read
ree

ಮುಂಬೈ: ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ದೇಶದಲ್ಲಿ ತಂಗಿದ್ದ ಒಂಬತ್ತು ಬಾಂಗ್ಲಾ ಪ್ರಜೆಗಳನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಇದರೊಂದಿಗೆ ಡಿಸೆಂಬರ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ 43 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ ಮುಂಬೈ, ನಾಸಿಕ್, ನಾಂದೇಡ್ ಮತ್ತು ಛತ್ರಪತಿ ಸಂಭಾಜಿ ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು.

ಬಂಧಿತರಲ್ಲಿ ಓರ್ವ ಮಹಿಳೆ ಸೇರಿದ್ದಾರೆ. ಸರಿಯಾದ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದರು. ಆರೋಪಿಗಳು ನಕಲಿ ದಾಖಲೆಗಳನ್ನು ಬಳಸಿ ಆಧಾರ್ ಕಾರ್ಡ್ ಪಡೆದಿದ್ದಾರೆ. ವಿದೇಶಿಯರ ಕಾಯಿದೆ ಮತ್ತು ಕಾನೂನಿನ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಅವರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Comments


Top Stories

bottom of page