ಅಮಿತ್ ಶಾ ಪ್ರತಿಕೃತಿ ದಹಿಸಿ ಪ್ರತಿಭಟನೆ
- Ananthamurthy m Hegde
- Dec 24, 2024
- 1 min read
ಶಿರಸಿ: ಲೋಕಸಭೆಯಲ್ಲಿ ಅಂಬೆಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ನಗರದ ಐದು ಸರ್ಕಲ್ ಶಿರಸಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಅಮಿತ್ ಷಾ ಪ್ರತಿಕೃತಿ ಧಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಗೃಹ ಸಚಿವ ಅಮಿತ್ ಷಾ ಅವರನ್ನು ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತಕ್ಷಣವೇ ವಜಾಗೊಳಿಸುವಂತೆ ಎಸಿ ಕಚೇರಿಗೆ ತೆರಳಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
Comments