top of page

ಅಮೆರಿಕಾಕದಲ್ಲಿ ಮೋದಿಗೆ ಆತ್ಮೀಯ ಸ್ವಾಗತ

  • Writer: Ananthamurthy m Hegde
    Ananthamurthy m Hegde
  • Feb 13
  • 1 min read

ವಾಷಿಂಗ್ಟನ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 2 ದಿನಗಳ ಯುಎಸ್ ಪ್ರವಾಸವನ್ನು ಬುಧವಾರ ಪ್ರಾರಂಭಿಸಿದ್ದು, ಜಾಯಿಂಟ್ ಆಂಡ್ರ್ಯೂಸ್ ಬೇಸ್‌ಗೆ ಬಂದಿಳಿದ ಅವರಿಗೆ ಅನಿವಾಸಿ ಭಾರತೀಯರು ಆತ್ಮೀಯ ಸ್ವಾಗತವನ್ನು ಕೋರಿದರು.

ಅಮೆರಿಕಕ್ಕೆ ಬಂದಿಳಿದ ಬಳಿಕ ಮೋದಿ ಬ್ಲೇರ್ ಹೌಸ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಭಾರತೀಯ ಸಮುದಾಯದವರು ಮೋದಿ ಅವರನ್ನು ಸ್ವಾಗತಿಸಿದ್ದರು. ‘ಭಾರತ್ ಮಾತಾ ಕಿ ಜೈ’, ‘ಮೋದಿ.. ಮೋದಿ..’ ಎಂದು ಘೋಷಣೆ ಕೂಗಿದರು.

ಶೀತ ಗಾಳಿ ಮತ್ತು ಮಳೆಯ ನಡುವೆವಲ್ಲೂ ಸಾಕಷ್ಟು ಮಂದಿ ಅನಿವಾಸಿ ಭಾರತೀಯರ ಪ್ರಧಾನಿ ಮೋದಿ ಅವರನ್ನು ಕಾಣಲು ಆಗಮಿಸಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಚಳಿಗಾಲದ ಚಳಿಯಲ್ಲಿ ಬೆಚ್ಚಗಿನ ಸ್ವಾಗತ. ಶೀತ ಹವಾಮಾನದ ಹೊರತಾಗಿಯೂ, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ಸಮುದಾಯದವರು ನನ್ನನ್ನು ವಿಶೇಷವಾಗಿ ಸ್ವಾಗತಿಸಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ಈ ನಡುವೆ ಭಾರತದ ಪ್ರಧಾನಿಯವರ ಅಮೆರಿಕ ಭೇಟಿಯನ್ನು ಗುರುತಿಸಲು ಬ್ಲೇರ್ ಹೌಸ್‌ನಲ್ಲಿ ಭಾರತದ ತ್ರಿವರ್ಣ ಧ್ವಜಗಳನ್ನು ಹಾಕಲಾಗಿದ್ದು, ಮೋದಿ ಬ್ಲೇರ್ ಹೌಸ್‌ನಲ್ಲಿ ತಂಗಿದ್ದಾರೆ, ಬ್ಲೇರ್ ಹೌಸ್ ಅಮೆರಿಕಾ ಅಧ್ಯಕ್ಷರ ಅಧಿಕೃತ ಅತಿಥಿಗೃಹವಾಗಿದೆ.

ಅಮೆರಿಕಾಗೆ ಭೇಟಿ ನೀಡಿರುವ ಮೋದಿ ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ (ಡಿಎನ್‌ಐ) ತುಳಸಿ ಗಬ್ಬಾರ್ಡ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಭಾರತ–ಅಮೆರಿಕ ನಡುವಿನ ಬಾಂಧವ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ.

Comments


Top Stories

bottom of page