top of page

ಆಗುಂಬೆ ಘಾಟ್ ನಲ್ಲಿ ನಾಳೆಯಿಂದ ಮೂರುವರೆ ತಿಂಗಳು ಭಾರೀ ವಾಹನ ಸಂಚಾರಕ್ಕೆ ನಿಷೇಧ

  • Writer: Ananthamurthy m Hegde
    Ananthamurthy m Hegde
  • Jun 14
  • 1 min read
ree

ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ನಾಳೆಯಿಂದ ಬರೋಬ್ಬರಿ ಮೂರುವರೆ ತಿಂಗಳುಗಳ ಕಾಲ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ಇರುವುದಿಲ್ಲ. ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಡುಪಿ, ಕುಂದಾಪುರ ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಭಾರೀ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.

ಆಗುಂಬೆ ಘಾಟ್ 169ಎ ಹೆದ್ದಾರಿಯನ್ನು ಬಂದ್ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ. ಮಲ್ಪೆ ಆಗುಂಬೆ ಹೆದ್ದಾರಿಯ ಭಾಗವಾಗಿರುವ ಆಗುಂಬೆ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಭಾರೀ ವಾಹನಗಳು ಪರ್ಯಾಯ ಮಾರ್ಗವನ್ನು ಬಳಸಬೇಕೆಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗ್ಡೆಆದೇಶಿಸಿದ್ದಾರೆ.

Comments


Top Stories

bottom of page