ಆನ್‌ಲೈನ್ ಗೇಮ್ ಚಟಕ್ಕೆ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ
- Ananthamurthy m Hegde
- Dec 26, 2024
- 1 min read

ಮೊಬೈಲ್ ಮೂಲಕ ಆನ್‌ಲೈನ್ ಗೇಮ್ ಚಟಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಬೀದರ್ ಮಲ್ಲಿ ನಡೆದಿದೆ . ಯುವಕನೊಬ್ಬ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ಪರಿಣಾಮ ಕೊನೆಗೆ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ . ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಜ್ಯೋತಿ ತಾಂಡಾದ ಬಳಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ದೇಹದ ಬಹುತೇಕ ಭಾಗ ಸುಟ್ಟು ಹೋಗಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ವಿಜಯ್‌ಕುಮಾರ್ ಜಗನ್ನಾಥ ಹೊಳ್ಳೆ (25) ಎಂದು ಗುರುತಿಸಲಾಗಿದೆ. ಮೂಲತಃ ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಯುವಕ ವಿಜಯ್‌ಕುಮಾರ್ ಜಗನ್ನಾಥ ಹೊಳ್ಳೆ, ಆನ್‌ಲೈನ್ ಗೇಮ್ ಹುಚ್ಚಿಗೆ ಬಿದ್ದು 12 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಬಿ.ಫಾರ್ಮಸಿ ಪದವೀಧರನಾಗಿದ್ದು ಕೆಲ ತಿಂಗಳಿಂದ ಆನ್‌ಲೈನ್ ಗೇಮ್ ಹುಚ್ಚಿಗೆ ಬಿದ್ದಿದ್ದ ಎನ್ನಲಾಗಿದೆ.
ಲಕ್ಷಾಂತರ ರೂಪಾಯಿ ಸಾಲ ಮಾಡಿ ಆನ್‌ಲೈನ್‌ನಲ್ಲಿ ಕಳೆದುಕೊಂಡಿದ್ದ ಯುವಕನ ಹಣವನ್ನು ಈಗಾಗಲೇ ಕುಟುಂಬಸ್ಥರು 10 ಲಕ್ಷ ಸಾಲ ತೀರಿಸಿದ್ದರು. ಆದರೆ ಮತ್ತೆ ಎರಡು ಲಕ್ಷ ಸಾಲ ಮಾಡಿಕೊಂಡಿದ್ದ ವಿಜಯಕುಮಾರ್, ಈ ಸಾಲದ ವಿಷಯ ಮನೆಯಲ್ಲಿ ಗೊತ್ತಾದ್ರೆ ತೊಂದರೆ ಆಗುತ್ತೆ ಅಂತಾ ಅತ್ಮಹತ್ಯೆಗೆ ಯತ್ನಿಸಿದ್ದಾನೆ.
ಸದ್ಯ ಗಂಭೀರ ಗಾಯಗೊಂಡ ಯುವಕ ವಿಜಯ್‌ಕುಮಾರ್ ಜಗನ್ನಾಥ ಹೊಳ್ಳೆ ನನ್ನು ಬ್ರೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮೇಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.















Comments