top of page

ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

  • Writer: Ananthamurthy m Hegde
    Ananthamurthy m Hegde
  • Jan 3
  • 1 min read
ree

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಇಂದು ಬೆಂಗಳೂರು (Bengaluru) ಮತ್ತು ಬೆಳಗಾವಿಗೆ (Belagavi) ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ಅವರು ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ (NIMHANS) ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಕೆಎಲ್‌‌ಇ ಕ್ಯಾನ್ಸರ್ ಆಸ್ಪತ್ರೆ (Cancer Hospital) ಉದ್ಘಾಟನೆ ಮಾಡಲಿದ್ದಾರೆ.

ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ರಾಷ್ಟ್ರಪತಿ ಅವರು ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 10-50ಕ್ಕೆ ಹೆಚ್​​ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯರಲಿದ್ದಾರೆ. HAL ವಿಮಾನ ನಿಲ್ದಾಣದಿಂದ ನೇರವಾಗಿ ನಿಮ್ಹಾನ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಜಾಹೀರಾತು

ನಿಮ್ಹಾನ್ಸ್ ಕಾರ್ಯಕ್ರಮ ಮುಗಿಸಿ HAL ಏರ್‌ಪೋರ್ಟ್‌ಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2-20ಕ್ಕೆ HAL ಏರ್ಪೋರ್ಟ್ ನಿಂದ ಬೆಳಗಾವಿಗೆ ತೆರಳಲಿದ್ದಾರೆ. ಮದ್ಯಾಹ್ನ 3-55ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಮಾನ‌ ನಿಲ್ದಾಣದಂದ ಕೆ‌ಎಲ್‌ಇ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಕೆಎಲ್‌‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮ ಮುಗಿಸಿ ಸಂಜೆ 5-30ಕ್ಕೆ ಬೆಳಗಾವಿ ಏರ್‌ಪೋರ್ಟ್‌ನಿಂದ ದೆಹಲಿಗೆ ವಾಪಾಸ್ಸಾಗಲಿದ್ದಾರೆ.

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಂಗಳೂರು ಭೇಟಿ ಹಿನ್ನೆಲೆ, ನಿಮ್ಹಾನ್ಸ್ ಸುತ್ತಮುತ್ತ ನೋ ಫ್ಲೈಯಿಂಗ್ ಜೋನ್ ಎಂದು ಘೋಷಣೆ ಮಾಡಲಾಗಿದೆ. 1 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಏರ್ ​ಕ್ರಾಫ್ಟ್ ಹಾರಾಟವನ್ನು ನಿಷೇಧಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ಏರ್​ ಕ್ರಾಫ್ಟ್ ಹಾರಾಟ ನಿಷೇಧ ಮಾಡಿ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಡ್ರೋನ್, ಯುಎವಿ, ಗ್ಲೀಡರ್ ಏರ್ ಕ್ರಾಫ್ಟ್ ಮತ್ತು ಎಲ್ಲಾ ರೀತಿಯ ಸಣ್ಣ ಏರ್ ಕ್ರಾಫ್ಟ್ ಹಾಗೂ ನಾನ್ ಶೆಡ್ಯೂಲ್ಡ್ ಏರ್ ಕ್ರಾಫ್ಟ್ ಹಾರಾಟ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ.

Comments


Top Stories

bottom of page