ಉಗ್ರರ ದಾಳಿ ಭೀತಿ – ಪಾಕ್ ಸೇನೆ ತೊರೆಯುತ್ತಿದ್ದಾರೆ ಯೋಧರು!
- Ananthamurthy m Hegde
- Mar 18
- 1 min read
ಇಸ್ಲಾಮಾಬಾದ್: ಬಲೂಚಿಸ್ತಾನ (Balochistan) ಸೇರಿದಂತೆ ಪಾಕಿಸ್ತಾನದ (Pakistan) ಅನೇಕ ಕಡೆಗಳಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕರ ದಾಳಿಯಿಂದ ಪಾಕ್ ಯೋಧರು (Pakistan Army) ಸೇನೆಗೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ. ಒಂದೇ ವಾರದಲ್ಲಿ 2500ಕ್ಕೂ ಹೆಚ್ಚು ಸೈನಿಕರು ರಾಜೀನಾಮೆ ನೀಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಈ ವಿಚಾರದ ಬಗ್ಗೆ ಪಾಕ್ ಸರ್ಕಾರ ಅಧಿಕೃತ ಮಾಹಿತಿ ನೀಡಿಲ್ಲ.

ಬಲೂಚಿಸ್ತಾನ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ – ಬಲೂಚಿಸ್ತಾನ ಲಿಬರೇಷನ್ ಆರ್ಮಿ ಬಂಡುಕೋರರು ಸೇನೆಯನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸುತ್ತಲೇ ಇದ್ದಾರೆ. ಈ ದಾಳಿಗಳಿಂದ ಭಾರೀ ಸಂಖ್ಯೆಯಲ್ಲಿ ಸೈನಿಕರು ಮೃತಪಟ್ಟಿರುವುದೇ ಇತರರು ರಾಜೀನಾಮೆ ನೀಡಲು ಕಾರಣ ಎನ್ನಲಾಗಿದೆ.
ಮಾ.16ರಂದು ಪಾಕ್ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ಪುಲ್ವಾಮಾ ಮಾದರಿಯ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 90 ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಬಿಎಲ್‌ಎ ಹೇಳಿಕೊಂಡಿತ್ತು. ಪಾಕಿಸ್ತಾನದಲ್ಲಿ ಭದ್ರತಾ ವ್ಯವಸ್ಥೆ ಬಹಳ ಕಳಪೆಯಾಗಿದೆ. ಇದಕ್ಕಾಗಿ ಸೇನೆ ತೊರೆಯುತ್ತಿರುವ ಯೋಧರು ತಮ್ಮ ಜೀವ ಕಳೆದುಕೊಳ್ಳುವ ಬದಲಿಗೆ ಸೇನೆ ತೊರೆದು ವಿದೇಶಗಳಲ್ಲಿ ಉದ್ಯೋಗಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.
Comentarios