ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
- Ananthamurthy m Hegde
- Dec 7, 2024
- 1 min read

ಬೆಂಗಳೂರು: ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ನಂತರ ಮಳೆ ಬಹುತೇಕ ಕಡಿಮೆಯಾಗಿದ್ದು ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಮುಖ್ಯವಾಗಿ ಒಣ ಹವಾಮಾನದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 7, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನಸೂಚನೆ ಇದೆ.
ಸೋಮವಾರದಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮಂಗಳವಾರವೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬುಧವಾರದಂದು ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ ವಾರದ ಗುರುವಾರ ಮಳೆ ಪ್ರದೇಶಗಳು ಹೆಚ್ಚಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. , ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಹಗಲಿನಲ್ಲಿ ಮುಖ್ಯವಾಗಿ ಸ್ಪಷ್ಟವಾದ ಆಕಾಶ, ಸಂಜೆ/ರಾತ್ರಿಯ ಕಡೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 19°C ಆಗಿರಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
Comments