top of page

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ರೆಡ್ ಅಲರ್ಟ್

  • Writer: Ananthamurthy m Hegde
    Ananthamurthy m Hegde
  • Jun 11
  • 1 min read
ree

ಜಿಲ್ಲೆಯಲ್ಲಿ ಪುನಃ ಮಳೆ ಆರಂಭವಾಗಲಿದ್ದು, ಜೂನ್ 12 ರಿಂದ 14ರ ವರೆಗೆ ಸುರಿಯಲಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಗೆ ವಹಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಹೇಳಿದ್ದಾರೆ.

ಮೂರು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಮೀನುಗಾರಿಕೆ ಪರಿಕರಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆ, ಕಡಲತೀರದಲ್ಲಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಆದೇಶ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ತೊಂದರೆ ಎದುರಾದಲ್ಲಿ 08382229857, 9483511015 ಸಂಖ್ಯೆಗೆ ಮಾಹಿತಿ ನೀಡಬಹುದು ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Comments


Top Stories

bottom of page