ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ: ಭಟ್ಕಳದಲ್ಲಿ ಕೈ ಕಾರ್ಯಕರ್ತರ ಸಂಭ್ರಮಾಚರಣೆ
- Ananthamurthy m Hegde
- Nov 23, 2024
- 1 min read
ಭಟ್ಕಳ: ರಾಜ್ಯದ ಮೂರು ವಿಧಾನಸಭೆಯ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿದ ಬೆನ್ನಲ್ಲೇ ಭಟ್ಕಳದ ಸಂಶುದ್ದೀನ್ ಸರ್ಕಲ್ ನಲ್ಲಿ ಭಟ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ ಮಾತನಾಡಿ ಮೂರು ಕ್ಷೇತ್ರದಲ್ಲಿ ನಡೆದ ಉಪಚುನಾವಣೆ ನಮ್ಮ ಪಕ್ಷದ ಅಭ್ಯರ್ಥಿಗಳುಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ.
ನಮ್ಮ ನಾಯಕರಾದ ಸಿದ್ದರಾಮಯ್ಯ ,ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಮತ್ತು ಮಂಕಾಳ ವೈದ್ಯರ ಸಾರತವ್ಯದಲ್ಲಿ ನಡೆದ ಈ ಚುನಾವಣೆಯಲ್ಲಿ ಆ ಭಾಗದ ಮತದಾರರು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ಮೂಲಕ ಗೆಲುವಿಗೆ ಕಾರಣರಾಗಿದ್ದಾರೆ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಮೂರು ಅಭ್ಯರ್ಥಿಗಳ ತುಂಬಾ ಶ್ರಮ ಪಟ್ಟಿದ್ದಾರೆ. ಜನರು ತುಂಬಾ ನಿರೀಕ್ಷೆ ಇಟ್ಟು ಕಾಂಗ್ರೇಸ್ ಪಕ್ಷಕ್ಕೆ ಮತದಾನ ಮಾಡಿದ್ದಾರೆ. ಈ ಮತದಾನಕ್ಕೆ ಯಾವುದೇ ರೀತಿ ಚ್ಯುತಿ ಬರದಂತೆ ನೋಡಿಕೊಳ್ಳುತ್ತೇವೆ ಎಂದ ಅವರು ಈ ಮೂರು ಭಾಗದಲ್ಲಿ ಕೂಡ ನಮ್ಮ ಸಚಿವರಾದ ಮಂಕಾಳ್ ವೈದ್ಯರ ನೇತೃತ್ವದಲ್ಲಿ ಪ್ರಚಾರಕ್ಕೆ ತೆರಳಿದ್ದೆವು. ಈಗ ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡಿದ ಮೂರು ಭಾಗದ ಜನತೆಗೆ ನಾನು ಧನ್ಯವಾದ ತಿಳಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ತಾಲೂಕ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಸುರೇಶ ನಾಯ್ಕ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ್ ನಾಯ್ಕ, ಸುಧಾಕರ ನಾಯ್ಕ, ರಾಜೇಶ ನಾಯ್ಕ, ಮಂಜುನಾಥ ನಾಯ್ಕ, ಮಜೀದ್, ಮಂಜಪ್ಪ ನಾಯ್ಕ ಜಾಲಿ ಉಪಸ್ಥಿತರಿದ್ದರು.
Comments