ಕೆಎಸ್ಸಿಎ ಕಾರ್ಯದರ್ಶಿ ಸ್ಥಾನಕ್ಕೆ ಎ ಶಂಕರ್ ರಾಜೀನಾಮೆ
- Ananthamurthy m Hegde
- Jun 7
- 1 min read

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಎ ಶಂಕರ್ ತಮ್ಮ ಸ್ಥಾನಕ್ಕೆ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದಾರೆ. ಎ ಶಂಕರ್ ಜೊತೆಗೆ ಖಜಾಂಚಿ ಜೈರಾಮ್ ಸಹ ರಾಜೀನಾಮೆ ನೀಡಿದ್ದು. ನಿನ್ನೆ KSCA ಅಧ್ಯಕ್ಷರಿಗೆ ಶಂಕರ್ ಹಾಗೂ ಜಯರಾಂ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ವರದಿ ಆಗಿದೆ.
ತಮ್ಮ 'ಪಾತ್ರ ಬಹಳ ಸೀಮಿತವಾಗಿದ್ದರೂ' ದುರಂತಕ್ಕೆ ತಾವು 'ನೈತಿಕ ಹೊಣೆಗಾರಿಕೆಯನ್ನು ಹೊಂದಿದ್ದೇವೆ', ನೈತಿಕ ಜವಾಬ್ದಾರಿಯಿಂದ, ನಾವು ನಿನ್ನೆ ರಾತ್ರಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ. ದಿನಾಂಕ 06.06.2025 ರಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ" ಎಂದು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೈತಿಕ ಹೊಣೆಹೊತ್ತು ಕೆಎಸ್ಸಿಎ ಕಾರ್ಯದರ್ಶಿ ಎ ಶಂಕರ್ ರಾಜೀನಾಮೆ ನೀಡಿದ್ದಾರೆ.















Comments