top of page

ಕಂಬಳ ಪ್ರಿಯರಿಗೆ ಗುಡ್ ನ್ಯೂಸ್

  • Writer: Ananthamurthy m Hegde
    Ananthamurthy m Hegde
  • Dec 21, 2024
  • 1 min read

ree

ಉಡುಪಿ: ಕರ್ನಾಟಕ ರಾಜ್ಯ ಅನೇಕ ಸಂಸ್ಕೃತಿ, ಆಚರಣೆ ವಿಚಾರಗಳಿಗೆ ತವರೂರು. ಅದರಲ್ಲೂ ಕರ್ನಾಟಕದ ಕರಾವಳಿ ಜನರ ಅತ್ಯಂತ ಜನಪ್ರಿಯ ಕ್ರೀಡೆಯಾಗಿರುವ ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಪ್ರತೀ ಕಂಬಳಕ್ಕೆ 5 ಲಕ್ಷ ಅನುದಾನ

ಹೌದು, ಕರಾವಳಿಯ ಪ್ರತೀ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷದ ಕಂಬಳಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಕರಾವಳಿಯ ಶಾಸಕರು ಬೇಡಿಕೆಯನ್ನು ಸಲ್ಲಿಸಿದ್ದರು. ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಸ್ಪೀಕರ್ ಯುಟಿ ಖಾದರ್ ಚಾಟಿ ಬೀಸಿದ್ದರು. ಯು.ಟಿ.ಖಾದರ್ ಚಾಟಿ ಬೀಸಿದ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಆದೇಶ ಮಾಡಿದ್ದಾರೆ. ಮುಖ್ಯಮಂತ್ರಿಗಳ ಶಿಫಾರಸ್ಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಆದೇಶ ಹೊರಡಿಸಿದ್ದಾರೆ.


ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕಂಬಳ ಸಮಿತಿ ಅಧ್ಯಕ್ಷ

2024- 25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ನೀಡುವ ಆದೇಶ ಹೊರಡಿಸಿರುವುದು ಕಂಬಳ ಪ್ರೀಯರಲ್ಲಿ ಹರ್ಷ ಉಂಟು ಮಾಡಿದೆ. ಸಿಹಿ ಸುದ್ದಿಯ ಬೆನ್ನಲ್ಲೇ ಬಾಕಿ ಉಳಿದ ಬೇಡಿಕೆ ಈಡೇರಿಕೆಗೆ ಒತ್ತಾಯ ಆರಂಭವಾಗಿದೆ. ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕಂಬಳ ಸಮಿತಿಯ ಅಧ್ಯಕ್ಷ ದೇವಿ ಪ್ರಸಾದ ಶೆಟ್ಟಿ ಆದೇಶ ಹೊರಡಿಸಿದ್ದಾರೆ.


50 ಲಕ್ಷ ಅನುದಾನ ಬಿಡುಗಡೆಗೆ ಒತ್ತಾಯ

ಒಟ್ಟು 25 ಕಂಬಳಗಳು ನಡೆಯುತ್ತವೆ. ಪ್ರತೀ ಕಂಬಳವನ್ನು ನೇರವಾಗಿ ಒಂದು ಲಕ್ಷ ಜನ ವೀಕ್ಷಿಸುತ್ತಾರೆ. 2020 21ನೇ ಸಾಲಿನಲ್ಲಿ 10 ಉಡುಪಿ ಜಿಲ್ಲೆಯ 10 ಕಂಬಳಗಳಿಗೆ ತಲಾ 5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ನಡೆಯುವ 53 ಸಾಂಪ್ರದಾಯಿಕ ಕಂಬಳ ಗಳಿಗೂ ಅನುದಾನ ಕೋರಲಾಗಿತ್ತು. ಕಳೆದ ವರ್ಷ 50 ಲಕ್ಷ ಘೋಷಿಸಿ ಸರಕಾರ ಅನುದಾನ ನೀಡಿರಲಿಲ್ಲ, ಘೋಷಣೆಯಾದ 50 ಲಕ್ಷ ಬಿಡುಗಡೆಗೆ ಒತ್ತಾಯಿಸಿರುವ ಕಂಬಳ ಸಮಿತಿ. ಅದಲ್ಲದೆ ಸಾಂಪ್ರದಾಯಿಕ ಕಂಬಳಗಳಿಗೂ 50 ಲಕ್ಷ ಬಿಡುಗಡೆ ಮಾಡುವಂತೆ ಸಮಿತಿ ಒತ್ತಾಯಿಸಿದೆ. ಕರಾವಳಿಯ ನಂತರ ಬೆಂಗಳೂರಿನಲ್ಲೂ ತುಳುನಾಡ ಕಂಬಳ ಸದ್ದು ಮಾಡಿತ್ತು.

Comments


Top Stories

bottom of page