top of page

ಕುಂಭಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪವಿತ್ರ ಸ್ನಾನ

  • Writer: Ananthamurthy m Hegde
    Ananthamurthy m Hegde
  • Feb 10
  • 1 min read

ಪ್ರಯಾಗರಾಜ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.

ತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಲಿದರು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು.

ಸೋಮವಾರ ಪ್ರಯಾಗರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ವಾಗತಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments


Top Stories

bottom of page