top of page

ಕ್ಯಾಲಿಫೊರ್ನಿಯಾಯದಲ್ಲಿ ವಿಧ್ವಂಸಕ ಕೃತ್ಯ : ಕಠಿಣ ಕ್ರಮಕ್ಕೆ ಭಾರತ ಆಗ್ರಹ

  • Writer: Ananthamurthy m Hegde
    Ananthamurthy m Hegde
  • Mar 9
  • 1 min read

ನವದೆಹಲಿ: ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ ಭಾರತದ ವಿರುದ್ಧ ಗೀಚುಬರಹದೊಂದಿಗೆ ವಿಧ್ವಂಸಕ ಕೃತ್ಯ ಎಸಗಲಾಗಿದ್ದು, ಇದನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇಂತಹ ನೀಚ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ree

ಘಟನೆಯ ಹಿನ್ನೆಲೆಯಲ್ಲಿ ಪೂಜಾ ಸ್ಥಳಗಳಿಗೆ ಸಾಕಷ್ಟು ಭದ್ರತೆಯನ್ನು ಒದಗಿಸುವಂತೆಯೂ ಭಾರತ ಒತ್ತಾಯಿಸಿದೆ.

ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ ನಡೆದ ವಿಧ್ವಂಸಕ ಕೃತ್ಯದ ವರದಿಗಳನ್ನು ನಾವು ನೋಡಿದ್ದೇವೆ. ಇಂತಹ ಹೇಯ ಕೃತ್ಯಗಳನ್ನು ನಾವು ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಈ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು, ಪೂಜಾ ಸ್ಥಳಗಳಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಲು ನಾವು ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಹೇಳಿದರು.

-ಘಟನೆಯ ಕುರಿತು ಮಾಧ್ಯಮ ಪ್ರಶ್ನೆಗಳಿಗೆ ಜೈಸ್ವಾಲ್ ಪ್ರತಿಕ್ರಿಯಿಸುತ್ತಿದ್ದರು. ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS), ಚಿನೋ ಹಿಲ್ಸ್‌ನಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ವಿಧ್ವಂಸಕ ಕೃತ್ಯವೆಸಗಲಾಗಿದೆ ಎಂದು ಹೇಳಿದೆ.

ಕ್ಯಾಲಿಫೋರ್ನಿಯಾದ ಚಿನೋ ಹಿಲ್ಸ್‌ನಲ್ಲಿ ಮಂದಿರ ಅಪವಿತ್ರಗೊಂಡಿದ್ದು, ಹಿಂದೂ ಸಮುದಾಯವು ಇಂತಹ ದ್ವೇಷದ ವಿರುದ್ಧ ದೃಢವಾಗಿ ನಿಂತಿದೆ. ಚಿನೋ ಹಿಲ್ಸ್ ಮತ್ತು ದಕ್ಷಿಣ ಕ್ಯಾಲಿಫೋರ್ನಿಯಾದ ಸಮುದಾಯದೊಂದಿಗೆ, ನಾವು ಎಂದಿಗೂ ದ್ವೇಷ ತುಂಬಲು ಬಿಡುವುದಿಲ್ಲ ಎಂದು BAPS ಸಾರ್ವಜನಿಕ ವ್ಯವಹಾರಗಳ ಇಲಾಖೆ ಎಕ್ಸ್ ಖಾತೆಯಲ್ಲಿ ತಿಳಿಸಿದೆ.

ಉತ್ತರ ಅಮೆರಿಕಾದಲ್ಲಿ ಹಿಂದೂ ಧರ್ಮದ ತಿಳುವಳಿಕೆಯನ್ನು ಸುಧಾರಿಸಲು ಮೀಸಲಾಗಿರುವ ವಕಾಲತ್ತು ಗುಂಪು ಉತ್ತರ ಅಮೆರಿಕಾದ ಹಿಂದೂಗಳ ಒಕ್ಕೂಟ (CoHNA), ಹಿಂದಿನ ಅಂತಹ ಪ್ರಕರಣಗಳತ್ತ ಗಮನ ಸೆಳೆದಿತು ಮತ್ತು

ಕಳೆದ ಕೆಲವು ವರ್ಷಗಳಲ್ಲಿ ಧ್ವಂಸಗೊಂಡ, ಕಳ್ಳತನವಾದ 10 ದೇವಾಲಯಗಳ ಪಟ್ಟಿಯನ್ನು ಉತ್ತರ ಅಮೆರಿಕಾದ ಹಿಂದೂಗಳ ಒಕ್ಕೂಟ(CoHNA)ನೀಡಿದೆ. ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಈ ಘಟನೆಯನ್ನು ಬಲವಾಗಿ ಖಂಡಿಸಿತ್ತು.

 
 
 

Comments


Top Stories

bottom of page