ಕೆರೆಯಲ್ಲಿ ಮುಳುಗಿ ಯುವಕ ಮೃತ
- Ananthamurthy m Hegde
- Jul 23
- 1 min read

ಕುಮಟಾ: ಕೆರೆಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಕುಮಟಾ ತಾಲೂಕಿನ ಹಳಕಾರ್ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದ ಹೋಟೆಲ್ ನಲ್ಲಿ ಸ್ವಾಗತಕಾರನಾಗಿದ್ದ ಪಟ್ಟಣದ ಹೊಸಹೆರವಟ್ಟಾದ ನಿಲೇಶ್ ನಾಯ್ಕ್ ಮೃತ ದುರ್ದೈವಿ. ಗೆಳೆಯರೊಂದಿಗೆ ಕೆರೆಯಲ್ಲಿ ಈಜಾಡುವಾಗ ಘಟನೆ ಸಂಭವಿಸಿದೆ. ಅಗ್ನಿಶಾಮದ ದಳದವಾರ ಸಹಾಯದಿಂದ ಯುವಕನನ್ನು ಮೇಲೆತ್ತಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಮೃತ ಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪಿಎಸ್ಐ ಮಯೂರ್ ಪಟ್ಟಣಶೆಟ್ಟಿ ಹೇಳಿದ್ದಾರೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments