ಕಾರವಾರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
- Ananthamurthy m Hegde
- 7 hours ago
- 1 min read

ಕಾರವಾರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘ ನೂತನವಾಗಿ ಅಸ್ಥಿತ್ವಕ್ಕೆ ಬಂದಿದ್ದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಪವರ್‌ಟಿವಿ ವರದಿಗಾರ ಉದಯ ಬರ್ಗಿ, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ವರದಿಗಾರ ಪ್ರಮೋದ ಹರಿಕಂತ್ರ, ಕಾರ್ಯದರ್ಶಿಯಾಗಿ ನ್ಯೂಸ್೧೮ ವರದಿಗಾರ ದರ್ಶನ ನಾಯ್ಕ, ಖಜಾಂಚಿಯಾಗಿ ಸುವರ್ಣವಾಹಿನಿ ವರದಿಗಾರ ಭರತರಾಜ್ ಕಲ್ಲಡಕ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಶಿರಸಿಯಲ್ಲಿ ಜಿಲ್ಲಾ ಕೇಂದ್ರ ಹೊಂದಿದ್ದು ಈವರೆಗೆ ಜಿಲ್ಲೆಯ ೧೧ ತಾಲೂಕಿನಲ್ಲಿ ತಾಲೂಕಾ ಸಂಘವನ್ನು ಹೊಂದಿತ್ತು. ೨೦೨೫ನೇ ಸಾಲಿನಲ್ಲಿ ಕಾರವಾರದಲ್ಲೂ ಸಹ ತಾಲೂಕಾ ಸಂಘವನ್ನು ಹೊಂದುವ ಮೂಲಕ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯಚಟುವಟಿಕೆ ಆರಂಭಿಸಿದಂತಾಗಿದೆ. ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅದರ ಅಡಿಯಲ್ಲಿ ಬರುವ ಎಲ್ಲ ತಾಲೂಕಾ ಸಂಘಗಳು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.
ಕಾರವಾರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಹಾಗೂ ನೂತನವಾಗಿ ಸಂಘ ಆರಂಭಿಸಲು ಸಹಕರಿಸಿದ ಸರ್ವ ಸದಸ್ಯರನ್ನು ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರರ್ಕರ ಸಂಘದ ಅಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಪಾಟೀಲ, ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರು, ಅಭಿನಂದಿಸಿದ್ದಾರೆ.
Comments