top of page

ಕಡಲತೀರದಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿದ ಅಧಿಕಾರಿಗಳು

  • Writer: Ananthamurthy m Hegde
    Ananthamurthy m Hegde
  • Dec 29, 2024
  • 1 min read
ree

ರವಿವಾರ ಬೆಳ್ಳಂಬೆಳಿಗ್ಗೆ ಮುರ್ಡೇಶ್ವರ ಕಡಲತೀರದಲ್ಲಿನ ಅನಧಿಕೃತ ಗೂಡಂಗಡಿಗಳನ್ನ ಪೊಲೀಸ್ ಬಂದೋಬಸ್ತ್ ನಲ್ಲಿ ಅಧಿಕಾರಿಗಳು ತೆರವುಗೊಸಿದ್ದಾರೆ. ಸಹಾಯಕ ಆಯುಕ್ತೆ ಡಾ. ನಯನ ಹಾಗೂ ತಹಶೀಲ್ದಾರ್ ನಾಗೇಂದ್ರ ಶೆಟ್ಟಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸಿಆರ್ ಝಡ್ ಉಲ್ಲಂಘನೆ ಮೇಲೆ ಗೂಡಂಗಡಿ ತೆರವುಗೊಳಿಸಲಾಗುತ್ತಿದೆ. ಕಳೆದ ಕೆಲ ತಿಂಗಳಿಂದ ಸುಮಾರು ಅಂಗಡಿಗಳು ಕಡಲ ತೀರದ ಎದುರು ಸ್ಥಳೀಯರು ಗೂಡಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ಸ್ಥಳೀಯರ ಮನವಿ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವರು ಅವಕಾಶ ಮಾಡಿಕೊಟ್ಟಿದ್ದರು. ಆದರೆ ಈಗ ಅಧಿಕಾರಿಗಳು ಮತ್ತು ಪೊಲೀಸರು ತೆರವುಗೊಳಿಸುತ್ತಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಕೋಲಾರ ಮೂಲದ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು. ಇದಾದ ಬಳಿಕ ಕಡಲತೀರ ಪ್ರವಾಸಿಗರಿಗೆ ನಿರ್ಬಂಧಿಸಲಾಗಿತ್ತು. ನಂತರ ಅಧಿಕಾರಿಗಳ ಸಭೆ ನಡೆಸಿ ಕಡಲತೀರ ಸುರಕ್ಷತೆ ದೃಷ್ಟಿಯಿಂದ ಕೆಲವೊಂದು ಮಾರ್ಪಾಡುಗಳನ್ನ ಮಾಡಲು ಯೋಜಿಸಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಬೀಚ್ ಓಪನ್ ಮಾಡುತ್ತಿರುವ ಹಿನ್ನಲೆಯಲ್ಲಿ ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಇನ್ನು ಅಧಿಕಾರಿಗಳು ಟ್ರಾಫಿಕ್ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಪುಟ್ ಪಾತ್ ಮೇಲಿದ್ದ ಮೂರು ಅಂಗಡಿಗಳಿಗೆ ತೆಗೆಯುವಂತೆ ಹೇಳಿದಾಗ ಸ್ವಯಂ ಪ್ರೇರಿತವಾಗಿ ಅಂಗಡಿ ಮಾಲೀಕರೆ ಅಂಗಡಿಯನ್ನು ತೆರವುಗೊಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

Comments


Top Stories

bottom of page