ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
- Ananthamurthy m Hegde
- Dec 1, 2024
- 1 min read
ಸಿದ್ದಾಪುರ: ಶಿಕ್ಷಣ ಮತ್ತು ವೃತ್ತಿ ಜೀವನದಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಾ ಇಂದಿಗೂ ನ್ಯಾಯಲಯದಲ್ಲಿ ಕನ್ನಡದಲ್ಲೇ ಆದೇಶ ನೀಡುತ್ತಿದ್ದೇನೆ ಎಂದು ಮಡಿಕೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ನ್ಯಾಯಾಧೀಶೆ ಸಿ ರೇಣುಕಾಂಬ ಹೇಳಿದರು.
ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ಕದಂಬ ಸೈನ್ಯದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.
ನಮ್ಮ ಕನ್ನಡಕ್ಕೆ ಪುರಾತನವಾದ ಇತಿಹಾಸವಿದೆ. ಆದರೆ ಇಂದು ಯುವ ಪೀಳಿಗೆಗೆ ಕನ್ನಡಾಭಿಮಾನ ಕಡಿಮೆಯಾಗುತ್ತಿದೆ. ನಾವು ಹೆಚ್ಚು ಕನ್ನಡವನ್ನು ಬಳಸಿದಾಗ ಮಾತ್ರ ಮುಂದಿನ ಪೀಳಿಗೆಗೆ ಸ್ವಚ್ಚ ಕನ್ನಡವನ್ನು ನೀಡಲು ಸಾಧ್ಯ ಎಂದರು.
ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Commentaires