top of page

ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಕಾಮಗಾರಿಗೆ ಗುದ್ದಲಿ ಪೂಜೆ

  • Writer: Ananthamurthy m Hegde
    Ananthamurthy m Hegde
  • Nov 21, 2024
  • 1 min read

ಸಿದ್ದಾಪುರ : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಿದ್ದಾಪುರ ತಾಲೂಕಾ ಸಮಿತಿ ಕಾರ್ಯಾಲಯವನ್ನು ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸಿ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು, ಚುನಾಯಿತ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ತಾಲೂಕಾ ಅಧ್ಯಕ್ಷ ಕೆ.ಜಿ.ನಾಗರಾಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

ನಂತರ ಸಿದ್ದಾಪುರ ಪಟ್ಟಣ ವ್ಯಾಪ್ತಿಯ ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯ ರಸ್ತೆ ಸುಧಾರಣೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ತ್ವರಿತಗತಿಯಲ್ಲಿ ಕೆಲಸ ಆರಂಭಿಸಿ ಗುಣಮಟ್ಟದ ರಸ್ತೆ ನಿರ್ಮಿಸುವಂತೆ ಸೂಚನೆ ನೀಡಿದರು.

Comments


Top Stories

bottom of page