ಗೋಕರ್ಣ ಸಮುದ್ರದಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
- Ananthamurthy m Hegde
- Nov 4, 2024
- 1 min read

ಕಾರವಾರ : ಸಮುದ್ರದಲ್ಲಿ ಸುಳಿಗೆ ಸಿಲುಕಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ನಡೆದಿದೆ. ಆಂದ್ರ ಮೂಲದ ಚರಣ್ (23), ಶ್ರೀಕಾಂತ್ (26) ರಕ್ಷಣೆಗೆ ಒಳಗಾದ ಪ್ರವಾಸಿಗರಾಗಿದ್ದಾರೆ.
ಆಂಧ್ರದ ಕಡಪ ಜಿಲ್ಲೆಯವರಾಗಿದ್ದು ನಾಲ್ಕು ಜನ ಪ್ರವಾಸಿಗರು ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿ ಈಜಾಡುತ್ತಿರುವಾಗ ಸುಳಿಗೆ ಸಿಲುಕಿ ಇಬ್ಬರೂ ಪ್ರವಾಸಿಗರು ಮುಳುಗುತ್ತಿದ್ದು ಗಮನಿಸಿ ಕರ್ತವ್ಯ ನಿರತ ಲೈಫ್ ಗಾರ್ಡ್ ಸಿಬ್ಬಂದಿಗಳಾದ ಹರೀಶ್ ಮೂಡಂಗಿ, ಮಂಜೇಶ್ ಹರಿಕಂತ್ರ, ಪ್ರಭಾಕರ ಅಂಬಿಗ ಇವರು ತಮ್ಮ ಜೀವದ ಹಂಗನ್ನು ತೊರೆದು ಇಬ್ಬರು ಪ್ರವಾಸಿಗರ ಜೀವ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Comments