ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ಬೀಳಲಿಲ್ಲ ರಾಜ್ಯಪಾಲರ ಅಂಕಿತ
- Ananthamurthy m Hegde
- Mar 26
- 1 min read
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಇದು ಸರ್ಕಾರಕ್ಕೆ ಮತ್ತೊಂದು ಹಿನ್ನೆಡೆಯಾಗಿದೆ.

ಬಿಬಿಎಂಪಿ ವಿಭಜನೆ ಮಾಡಿ ಬೆಂಗಳೂರು ನಗರ ವಿಸ್ತೀರ್ಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಜಾರಿಗೆ ಮುಂದಾಗಿತ್ತು. ಬಜೆಟ್ ಅಧಿವೇಶನದಲ್ಲಿ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಈ ಮಸೂದೆ ಅಂಗೀಕಾರವಾಗಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಸದ್ಯ ರಾಜ್ಯಪಾಲರು ಅಂಕಿತ ಹಾಕಲು ನಿರಾಕರಣೆ ಮಾಡಿದ್ದಾರೆ.
ಈ ಬಗ್ಗೆ ಸ್ವತಃ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.
Comments