ಗಡಿಯಲ್ಲಿ ನಿಲ್ಲದ ಪಾಕ್ ಉದ್ಧಟತನ: ಭಾರತದಿಂದ ತಕ್ಕ ಪ್ರತ್ಯುತ್ತರ
- Ananthamurthy m Hegde
- Apr 28
- 1 min read
ಶ್ರೀನಗರ: ಗಡಿಯಲ್ಲಿ ಪಾಕಿಸ್ತಾನ ಸೇನೆಯ ಉದ್ಧಟತನ ಮುಂದುವರಿದಿದ್ದು, ಸತತ ನಾಲ್ಕನೇ ದಿನವೂ ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ (LoC) ಪಾಕಿಸ್ತಾನದ ಪಡೆಗಳು ಗುಂಡಿನ ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸಿವೆ.

ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸತತ ನಾಲ್ಕನೇ ದಿನದ ರಾತ್ರಿಯಲ್ಲೂ ಪಾಕ್‌ನಿಂದ ಅಪ್ರಚೋದಿತ ದಾಳಿ ನಡೆದಿದೆ. ಕುಪ್ವಾರ ಹಾಗೂ ಪೂಂಜ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಉಗ್ರರ ದಾಳಿಯ ಬೆನ್ನಲ್ಲೇ ಗಡಿಯಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.
Comments