ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಸಮಾರಂಭಕ್ಕೆ PCB ಗೈರು! ಹೊಟ್ಟೆಕಿಚ್ಚಿಗೆ ಮದ್ದಿಲ್ಲ ಎಂದ ನೆಟ್ಟಿಗರು!
- Ananthamurthy m Hegde
- Mar 10
- 2 min read
ಐಸಿಸಿ ಚಾಂಪಿಯನ್ ಟ್ರೋಫಿಗೆ ಮುತ್ತಿಕ್ಕುವ ಮೂಲಕ ಟೀಂ ಇಂಡಿಯ ನೂರಾರು ಕೋಟಿ ಭಾರತೀಯರ ಕನಸನ್ನು ನನಸಾಗಿಸಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ಖುಷಿಯ ಅಲೆಯಲ್ಲಿ ತೇಲಾಡುತ್ತಿದ್ದಾರೆ. ಆದ್ರೆ ಪಾಕಿಸ್ತಾನ ಮಾತ್ರ ತನ್ನ ಕೊಂಕು ಬುದ್ದಿಯನ್ನು ಇಲ್ಲೂ ತೋರಿಸಿದೆ. ಹೌದು, ಅಂತಿಮ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ಗಳಿಂದ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗೆ ಚಾಂಪಿಯನ್ ಪಟ್ಟಕ್ಕೇರಿದ ಟೀಮ್ ಇಂಡಿಯಾಗೆ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಸಂದರ್ಭದಲ್ಲಿ ಪಾಕ್ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ಗೈರಾಗಿದ್ದು ಅಚ್ಚರಿಗೆ ಕಾರಣವಾಗಿದೆ.

Comments