ಚಾಲಕನ ನಿಯಂತ್ರಣ ತಪ್ಪಿದ ಬಸ್ : ೪೦ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ
- Ananthamurthy m Hegde
- Dec 9, 2024
- 1 min read
ಜೋಯಿಡಾ: ಗಣೇಶಗುಡಿ ಹತ್ತಿರ ಜಲಸಾಹಸ ಕ್ರಿಡೆಗೆ ಬಂದಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾಗಿದೆ .
ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸಗುರ್ಗಾದ ಸೇಂಟ್ ಅಂತೋನಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮೂರು ಖಾಸಗಿ ಬಸ್ಸಿನಲ್ಲಿ ದಾಂಡೇಲಿ - ಜೋಯಿಡಾಕ್ಕೆ ಪ್ರವಾಸದ ಮೂಲಕ ಬಂದಿದ್ದರು.
ತಾಲೂಕಿನ ಮೌಲಂಗಿ ಬಳಿಯ ಹೋಂ ಸ್ಟೇ ಯೊಂದರಲ್ಲಿ ತಂಗಿದ್ದರು. ಇಂದು ಬೆಳಿಗ್ಗೆ ಗಣೇಶಗುಡಿಗೆ ತೆರಳಿ ಅಲ್ಲಿ ಜಲ ಸಾಹಸ ಕ್ರೀಡೆ ಆಡಿ ಮರಳಿ ಬರುವಾಗ ದುರ್ಘಟನೆ ನಡೆದಿದೆ. ಬಸ್ಸಿನಲ್ಲಿ ಸರಿ ಸುಮಾರು 50 ವಿದ್ಯಾರ್ಥಿಗಳಿದ್ದು, 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ತಕ್ಷಣವೇ ಸ್ಥಳೀಯ ಗ್ರಾಮಸ್ಥರು ಸೇರಿ, ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಹೊರತೆಗೆದಿದ್ದಾರೆ. ತಕ್ಷಣವೇ ಗಾಯಗೊಂಡವರನ್ನು ಎರಡು ಆಂಬುಲೆನ್ಸ್ ಹಾಗೂ ಇನ್ನಿತರ ಖಾಸಗಿ ವಾಹನಗಳಲ್ಲಿ ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಹಾಗೂ ಬಸ್ಸಿನ ಚಾಲಕನಿಗೆ ಮತ್ತು ನಿರ್ವಾಹಕನಿಗೆ ಚಿಕಿತ್ಸೆ ನೀಡುವ ಕಾರ್ಯ ಮುಂದುವರೆದಿದೆ. ಜೋಯಿಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Comments