ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 4 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
- Ananthamurthy m Hegde
- Dec 20, 2024
- 1 min read

ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಆರೋಳ್ಳಿ ತಿರುವಿನಲ್ಲಿ ಪ್ರವಾಸಿಗರ ವಾಹನ ಪಲ್ಟಿ ಹೊಡೆದ ದುರ್ಘಟನೆ ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಹಳ್ಳಿಯ ಪ್ರೌಢಶಾಲಾ ವಿದ್ಯಾರ್ಥಿಗಳು ಗೋಕರ್ಣದಿಂದ ಕೋಲಾರಕ್ಕೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸ ವಾಹನ ಮಗುಚಿ ಬಿದ್ದಿದೆ. ವಾಹನದಲ್ಲಿದ್ದ 40 ಶಾಲಾ ಮಕ್ಕಳ ಪೈಕಿ 34 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಗೂ ಶಿಕ್ಷಕರಿಗೆ ಚಿಕ್ಕ –ಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ಸಹಕಾರದಿಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 2 ವಿದ್ಯಾರ್ಥಿ ಮತ್ತು 2 ವಿದ್ಯಾರ್ಥಿನಿಯರಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕೆತ ಇರುವುದರಿಂದ ವೈದ್ಯಾಧಿಕಾರಿಗಳ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಪ್ರಭಾವತ ನಗರದ ಪ್ರೌಢಶಾಲೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆಯನ್ನು ಮಾಡಲಾಗಿದೆ.
Comments