ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ
- Ananthamurthy m Hegde
- 5 days ago
- 1 min read

ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರತಾಲೂಕಿನ ಇಡಗುಂದಿ ಶಾಲೆಯ ಎದುರು ನಡೆದಿದೆ. ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಗಟಾರಕ್ಕೆ ಬಿದ್ದಿದೆ. ಲಾರಿ ಜಖಂಗೊಂಡಿದ್ದು, ಚಾಲಕ-ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
header.all-comments