top of page

ಚಳಿಗಾಲದ ಆರೋಗ್ಯಕ್ಕೆ ಜೇನುತುಪ್ಪ

  • Writer: Ananthamurthy m Hegde
    Ananthamurthy m Hegde
  • Nov 3, 2024
  • 1 min read

ree

ಚಳಿಗಾಲ ಇನ್ನೇನು ಶುರುವಾಗಲಿದೆ. ಈ ಚಳಿಗಾಲ ನಮ್ಮ ಚರ್ಮಕ್ಕೆ ಹಾನಿಕಾರಕ. ಈ ಋತುವಿನಲ್ಲಿ ಚರ್ಮವು ಶುಷ್ಕ ಮತ್ತು ನಿರ್ಜೀವವಾಗುತ್ತದೆ. ಇದಲ್ಲದೆ, ಶೀತ, ಕೆಮ್ಮು ಮತ್ತು ಜ್ವರದಂತಹ ಅನೇಕ ಆರೋಗ್ಯ ಸಮಸ್ಯೆಗಳ ಅಪಾಯವು ಹೆಚ್ಚಾಗುತ್ತದೆ. ಹೀಗಾಗಿ ಇವುಗಳನ್ನು ತಡೆಯಲು ಜೇನುತುಪ್ಪ ಉಪಯುಕ್ತವಾಗಿದೆ.

ಚಳಿಗಾಲದಲ್ಲಿ ಚರ್ಮದಲ್ಲಿನ ತೇವಾಂಶದ ನಷ್ಟ ಮತ್ತು ಚರ್ಮದ ಶುಷ್ಕತೆಯಿಂದ ಅನೇಕ ಚರ್ಮದ ಸಮಸ್ಯೆಗಳು ಉಂಟಾಗುತ್ತವೆ. ಈ ಋತುವಿನಲ್ಲಿ ದೇಹಕ್ಕೆ ವಿಟಮಿನ್ ಡಿ ಅಗತ್ಯವಿದೆ. ಇಲ್ಲದಿದ್ದರೆ, ಅದರ ಪರಿಣಾಮ ಚರ್ಮದ ಮೇಲೆ ಸ್ಪಷ್ಟವಾಗಿ ಗೋಚರಿಸುತ್ತದೆ. ವಿಟಮಿನ್ ಡಿ ಕರಗುವ ವಿಟಮಿನ್ ಆಗಿದೆ. ಇದು ಚರ್ಮವನ್ನು ಆರೋಗ್ಯವಾಗಿರಿಸುತ್ತದೆ. ಚಳಿಗಾಲದಲ್ಲಿ ಜೇನುತುಪ್ಪವನ್ನು ಸೇವಿಸುವುದರಿಂದ ಯಾವ ಆರೋಗ್ಯ ಸಮಸ್ಯೆಗಳನ್ನು ದೂರವಿಡಬಹುದು ಎಂಬುದನ್ನು ನಾವೀಗ ತಿಳಿದುಕೊಳ್ಳೋಣ.

ಒಂದು ಚಮಚ ಜೇನುತುಪ್ಪವನ್ನು ನಿಂಬೆ ರಸದೊಂದಿಗೆ ಬೆರೆಸಿ ಕುಡಿಯುವುದರಿಂದ ಶೀತ ಮತ್ತು ಕೆಮ್ಮು ನಿವಾರಣೆಯಾಗುತ್ತದೆ. ಅದೂ ಅಲ್ಲದೆ, ಜೇನು ಮತ್ತು ನಿಂಬೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹಕ್ಕೆ ಸುಲಭವಾಗಿ ಯಾವುದೇ ಕಾಯಿಲೆ ಬರುವುದಿಲ್ಲ.

ಒಂದು ಚಮಚ ಜೇನುತುಪ್ಪವನ್ನು ಒಂದು ಕಪ್ ಹರ್ಬಲ್ ಟೀಗೆ ಬೆರೆಸಿ ಸೇವಿಸಿದರೆ ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕುತ್ತದೆ ಮತ್ತು ದೇಹವನ್ನು ನಿರ್ವಿಷಗೊಳಿಸುತ್ತದೆ.

ಜೇನುತುಪ್ಪವನ್ನು ಸೇವಿಸುವುದರಿಂದ ತೂಕವನ್ನು ಕಳೆದುಕೊಳ್ಳಲು ಸಹ ಸಹಾಯ ಮಾಡುತ್ತದೆ. ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಅರ್ಧ ಚಮಚ ದಾಲ್ಚಿನ್ನಿ ಪುಡಿಯೊಂದಿಗೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ಉತ್ತಮ ಫಲಿತಾಂಶವನ್ನು ನೀಡುತ್ತದೆ.

ಜೇನುತುಪ್ಪವನ್ನು ಸೇವಿಸುವುದರಿಂದ ಹಲ್ಲಿನ ಸಮಸ್ಯೆಗಳನ್ನೂ ನಿವಾರಿಸಬಹುದು. ಒಂದು ಚಮಚ ಜೇನುತುಪ್ಪವನ್ನು ಎರಡು ಚಮಚ ಆಪಲ್ ಸೈಡರ್ ವಿನೆಗರ್ ನೊಂದಿಗೆ ಬೆರೆಸಿ ಸೇವಿಸುವುದರಿಂದ ಸೈನಸ್ ಅನ್ನು ನಿಯಂತ್ರಣದಲ್ಲಿಡಬಹುದು.

ಚಳಿಗಾಲದಲ್ಲಿ ಚರ್ಮಕ್ಕೆ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಚಳಿಗಾಲದಲ್ಲಿ ಚರ್ಮ ಒಣಗುತ್ತದೆ. ಚಳಿಗಾಲದಲ್ಲಿ ಬಿಸಿನೀರಿನ ಬದಲು ಬೆಚ್ಚಗಿನ ನೀರಿನ ಸ್ನಾನ ಮಾಡುವುದು ಉತ್ತಮ. ಇದಲ್ಲದೇ ಜೇನುತುಪ್ಪ ಸೇವನೆಯಿಂದ ಚರ್ಮಕ್ಕೆ ಸಂಬAಧಿಸಿದ ಸಮಸ್ಯೆಗಳೂ ನಿವಾರಣೆಯಾಗುತ್ತವೆ.

ಈ ಮೇಲಿನ ಎಲ್ಲವೂ ಸಾಮಾನ್ಯ ಆರೋಗ್ಯ ಸಲಹೆಗಳಾಗಿದ್ದು ಯಾವುದೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ವೈದ್ಯರನ್ನು ಸಂಪರ್ಕಿಸಬಹುದಾಗಿದೆ.

Comments


Top Stories

bottom of page