top of page

ಜೂ.8ರಿಂದ ರಾಜ್ಯದಲ್ಲಿ ಮತ್ತೆ ಮಳೆ

  • Writer: Ananthamurthy m Hegde
    Ananthamurthy m Hegde
  • Jun 7
  • 1 min read
ree

ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕೊಂಚ ವಿರಾಮವಾಗಿದ್ದ ಮುಂಗಾರು ಮಳೆ ನಾಳೆ ಜೂನ್ 8ರಿಂದ ಮತ್ತೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ, ಜಲಾಶಯದಿಂದ ನೀರು ಬಿಡುಗಡೆಯಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ ಮಳೆ ಬಿಡುವು ನೀಡಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿದೆ.

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಭಾರಿ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜೂನ್ 9 ರವರೆಗೆ ರಾಜ್ಯಾದ್ಯಂತ ಅತಿ ಸಾಧಾರಣ ಮಳೆಯಾಗಲಿದೆ. ಜೂ. 10 ರಿಂದ 12ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Comments


Top Stories

bottom of page