ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
- Ananthamurthy m Hegde
- Dec 3, 2024
- 1 min read
ಶಿರಸಿ: 24ನೇ ಉತ್ತರಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಮಂಗಳವಾರ ಅದ್ದೂರಿ ಚಾಲನೆ ನೀಡಲಾಯಿತು. ಶಾಸಕ ಭೀಮಣ್ಣ ನಾಯ್ಕ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಅಕ್ಷರ ಜಾತ್ರೆಗೆ ಚಾಲನೆ ನೀಡಿದರು . ಸಮ್ಮೇಳನದ ಸರ್ವಾಧ್ಯಕ್ಷ ಆರ್.ಡಿ. ಹೆಗಡೆ ಆಲ್ಮನೆ ಅವರ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿನ ಬೇಡರ ವೇಷದ ಪಾತ್ರಧಾರಿ ಪ್ರಮುಖ ಆಕರ್ಷಣೆಯಾಗಿತ್ತು. ಶಿರಸಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದಿದ್ದು ಮೂರು ಸಾವಿರಕ್ಕೂ ಹೆಚ್ಚು ಜನ ಭಾಗಿಯಾದರು. ಮೆರವಣಿಗೆಯಲ್ಲಿ ಎಸಿ ಕಾವ್ಯಾರಾಣಿ, ತಹಸೀಲ್ದಾರ್ ಶ್ರೀಧರ ಮುಂದಲಮನಿ ಮೆರವಣಿಯಲ್ಲಿ ಭಾಗಿಯಾಗಿದ್ದರು . ಮೆರವಣಿಗೆಯ ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ವಿದ್ಯಾರ್ಥಿಗಳ ಬ್ಯಾಂಡ್ ಸೆಟ್, ಡೊಳ್ಳುಕುಣಿತ, ತೊಗಲುಗೊಂಬೆ ಪ್ರದರ್ಶನ ನಡೆಯಿತು .
Comments