top of page

ದೀಪಾವಳಿಗೆ ದೇಶದ ಜನತೆಗೆ ಬಿಗ್ ಶಾಕ್ : ಧಿಢೀರ್ ಬೆಲೆ ಏರಿಕೆ ಕಂಡ ಎಲ್.ಪಿ.ಜಿ

  • Writer: Ananthamurthy m Hegde
    Ananthamurthy m Hegde
  • Nov 1, 2024
  • 1 min read

ree

ಬೆಂಗಳೂರು: ದೇಶದ ಜನತೆಗೆ ನವೆಂಬರ್ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿAದ ಭರ್ಜರಿ ಏರಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಜನರ ಜೇಬಿಗೆ ಕತ್ತರಿ ಬೀಳಲಿದೆ.

ಹೌದು ದೇಶಾದ್ಯಂತ ಇಂದು ದೀಪಾವಳಿ ಸಂಭ್ರಮ ಮನೆ ಮಾಡಿದೆ. ಆದರೆ ಸದ್ದಿಲ್ಲದೆ ಸತತ ೩ನೇ ತಿಂಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ೧೯ ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಇದೀಗ ೬೨ ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದ ವಾಣಿಜ್ಯ ಉದ್ದೇಶಕ್ಕೆ ಬಳಸುವ ಸಿಲಿಂಡರ್ ಬೆಲೆ ದುಬಾರಿಯಾಗಿದೆ. ಶೀಘ್ರದಲ್ಲೇ ಹೊಟೆಲ್ ತಿನಿಸು ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ.೧೪ ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬೆಲೆ ಏರಿಕೆ ಮಾಡಿಲ್ಲ.

ಬೆಲೆ ಏರಿಕೆ ಬಳಿಕ ೧೯ ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ ೧೮೦೨ ರೂಪಾಯಿಗೆ ಏರಿಕೆಯಾಗಿದೆ. ಸೆಪ್ಟೆಂಬರ್, ಅಕ್ಟೋಬರ್ ಇದೀಗ ನವೆಂಬರ್ ಸತತ ಮೂರು ತಿಂಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ೪೮ ರೂಪಾಯಿ ಏರಿಕೆಯಾಗಿತ್ತು. ಇನ್ನು ಸೆಪ್ಟೆಂಬರ್ ತಿಂಗಳಲ್ಲಿ ೧೯ ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ೩೯ ರೂಪಾಯಿ ಏರಿಕೆ ಮಾಡಲಾಗಿತ್ತು.

ಕೊಂಚ ಸಮಾಧಾನದ ವಿಷಯ ಎಂದರೆ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೀಗಾಗಿ ಈ ಬಾರಿಯ ದೀಪಾವಳಿಯನ್ನು ನೆಮ್ಮದಿಯಿಂದ ಆಚರಿಸುವಂತಾಗಿದೆ. ಆದರೆ ಹೊಟೆಲ್ ತಿಂಡಿ ಸೇರಿದಂತೆ ವಾಣಿಜ್ಯ ಸಿಲಿಂಡರ್ ಬಳಕೆ ಮಾಡುವ ಸಂಸ್ಥೆಗಳಲ್ಲಿನ ಉತ್ಪನ್ನಗಳ ಬೆಲೆ ಶೀಘ್ರದಲ್ಲೇ ಏರಿಕೆಯಾಗಲಿದೆ.

Comments


Top Stories

bottom of page