ದಶ ಲಕ್ಷ ಗಿಡ ನೆಡುವ ಅಭಿಯಾನಕ್ಕೆ ಉತ್ತಮ ಸ್ಪಂದನೆ
- Ananthamurthy m Hegde
- Jun 27
- 1 min read

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜಿಲ್ಲೆಯಲ್ಲಿ ಹಮ್ಮಿಕೊಂಡ ದಶಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಅರಣ್ಯ ಮಹಿಳಾ ವಾಸಿಗಳು ದಾಖಲೆ ಗಿಡ ನೆಡುವ ಅಭಿಯಾನ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ ಎಂದು ಅರಣ್ಯ ಭೂಮಿ ಹಕ್ಕು ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್ ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಜೂನ್ ೨೧ ರಂದು ೫೦೦ ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಏಕಕಾಲದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ೩೩ ವರ್ಷಗಳಿಂದ ಜರುಗುತ್ತಿರುವ ಅರಣ್ಯ ಭೂಮಿ ಹಕ್ಕು ಹೋರಾಟದಲ್ಲಿಯೂ ಭೂಮಿ ಹಕ್ಕಿಗಾಗಿ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಧುಮುಕಿದ್ದಾರೆ ಎಂದರು.
Comments