ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು
- Ananthamurthy m Hegde
- 5 hours ago
- 1 min read

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ನೀತಿ ಆಯೋಗದ ಸಭೆ ನಡೆಯಿತು. ನವದೆಹಲಿಯಲ್ಲಿ 10ನೇ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ನಡೆದಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ ಸಿಂಗ್ , ಜೆಪಿ ನಡ್ಡಾ , ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ಇನ್ನು ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದರು. ಇತ್ತ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ತಮಿಳುನಾಡು ಸಿಎಂ ಸ್ಟಾಲಿನ್ ಸೇರಿದಂತೆ ಹಲವರು ಭಾಗಿಯಾಗಿದ್ರು. ಆದ್ರೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮಾತ್ರ ಈ ಮಹತ್ವದ ಸಭೆಗೆ ಹೋಗದೇ ಗೈರಾಗಿದ್ದಾರೆ. ನೀತಿ ಆಯೋಗದ 10 ನೇ ಆಡಳಿತ ಮಂಡಳಿ ಸಭೆಗೆ ಎನ್‌ಡಿಎ ಆಡಳಿತದ ಪುದುಚೇರಿಯ ಮುಖ್ಯಸ್ಥರು ಸೇರಿದಂತೆ ದಕ್ಷಿಣದ ಮೂವರು ಮುಖ್ಯಮಂತ್ರಿಗಳು ಗೈರು ಹಾಜರಾಗಿದ್ದರು. ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣ ಮುಖ್ಯಮಂತ್ರಿಗಳಾದ ಎನ್ ಚಂದ್ರಬಾಬು ನಾಯ್ಡು, ಎಂಕೆ ಸ್ಟಾಲಿನ್ ಮತ್ತು ಎ ರೇವಂತ್ ರೆಡ್ಡಿ ಅವರು ಸಭೆಯಲ್ಲಿ ಭಾಗವಹಿಸಿ ತಮ್ಮ ರಾಜ್ಯಗಳ ಕಳವಳಗಳನ್ನು ಪರಿಷತ್ತಿನ ಮುಂದೆ ಮಂಡಿಸಿದರು. ಆಪರೇಷನ್ ಸಿಂಧೂರ್ ನಂತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ಪ್ರಧಾನ ಮಂತ್ರಿಯವರ ಮೊದಲ ಪ್ರಮುಖ ಸಭೆ ಇದಾಗಿದ್ದು, ಭಾರೀ ಮಹತ್ವ ಪಡೆದಿತ್ತು.
Comments