ನಿಷೇಧಿತ ಸಂಘಟನೆಗಳ ಮೂವರು ಉಗ್ರರ ಬಂಧನ
- Ananthamurthy m Hegde
- Jul 3
- 1 min read

ಇಂಫಾಲ್: ಮಣಿಪುರದ ಇಂಫಾಲ್ ಕಣಿವೆ ಜಿಲ್ಲೆಗಳಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಷ್ಣುಪುರ ಜಿಲ್ಲೆಯ ಮೈತ್ರಮ್ ಪ್ರದೇಶದಲ್ಲಿ ನಿಷೇಧಿತ ಪ್ರೆಪಾಕ್ ಸಂಘಟನೆಯ ಸದಸ್ಯ ಒಯಿನಮ್ ಹೇಮಂಜಿತ್ ಸಿಂಗ್ ನನ್ನ ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಇಂಫಾಲ್ ಪೂರ್ವ ಜಿಲ್ಲೆಯ ಸೆಜಿನ್ ಮಾನಿಂಗ್ ಲೈಕೈ ಪ್ರದೇಶದಲ್ಲಿ ನಿಷೇಧಿತ ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಕ್ಷದ ಸದಸ್ಯ ಓಯಿನಮ್ ಟೊಂಬಾ ಸಿಂಗ್‌ನನ್ನು ಭದ್ರತಾ ಪಡೆಗಳು ಬಂಧಿಸಿವೆ. ಈತನ ಮೇಲೆ ಕಾಕ್ಟಿಂಗ್ ಮತ್ತು ತೌಬಲ್ ಜಿಲ್ಲೆಗಳ ವಿವಿಧ ಪೆಟ್ರೋಲ್ ಪಂಪ್‌ಗಳಲ್ಲಿ ಸುಲಿಗೆ ಮಾಡಿದ ಆರೋಪವಿದೆ.
ಕಾಕ್ಟಿಂಗ್ ಜಿಲ್ಲೆಯಲ್ಲಿ ಕಾಂಗ್ಲಿಪಾಕ್ ಕಮ್ಯುನಿಸ್ಟ್ ಪಕ್ಷದ ಸದಸ್ಯ ಲೌರೆಂಬಮ್ ಸುರೇಶ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರ ವಶ:
ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.















Comments