ನ. ೨೭ರಿಂದ ಅನಿರ್ದಿಷ್ಟಾವಧಿ ಮುಷ್ಕರ
- Ananthamurthy m Hegde
- Nov 18, 2024
- 1 min read
ಸಿದ್ದಾಪುರ : ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದಿಂದ ನವಂಬರ್ 27ಕ್ಕೆ ಬೆಂಗಳೂರಿನಲ್ಲಿ ಅನಿರ್ಧಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ತಾಲೂಕು ಘಟಕದ ಅಧ್ಯಕ್ಷ ಗುರುಮೂರ್ತಿ, ಕುಡಿಯುವ ನೀರು, ನೈರ್ಮಲ್ಯ ಸೇವೆ ಸ್ಥಗಿತಗೊಳಿಸಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಬಿಲ್ ಕಲೆಕ್ಟರ್, ಡೇಟಾ ಎಂಟ್ರಿ ಅಪರೇಟರ್ಗಳಿಗೆ ಸಿ ದರ್ಜೆ ಸ್ಥಾನಮಾನ ನೀಡಬೇಕು. ಅಟೆಂಡರ್, ಕ್ಲೀನರ್, ವಾಟರ್ ಮ್ಯಾನ್ ಗಳಿಗೆ ಡಿ ದರ್ಜೆ ನೀಡಬೇಕು. 2019ರ ಸರ್ಕಾರದ ಸುತ್ತೋಲೆ ಪ್ರಕಾರ ವೇತನ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.














Comments