ನ.೩೦ಕ್ಕೆ ರಾಜ್ಯಮಟ್ಟದ ಡೊಳ್ಳುಕುಣಿತ ಸ್ಪರ್ಧೆ
- Ananthamurthy m Hegde
- Nov 28, 2024
- 1 min read
ಸಿದ್ದಾಪುರ : ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸಂಘಟನೆಯ ತಾಲೂಕು ಘಟಕದ ವತಿಯಿಂದ ನ.೩೦ರಂದು ಸಂಜೆ ೫ರಿಂದ ಪಟ್ಟಣದ ನೆಹರೂ ಮೈದಾನದಲ್ಲಿ ಪ್ರಥಮ ವರ್ಷದ ರಾಜ್ಯಮಟ್ಟದ ಹೊನಲು ಬೆಳಕಿನ ಡೊಳ್ಳು ಕುಣಿತ ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಸಂಘಟನೆಯ ತಾಲೂಕು ಗೌರವಾಧ್ಯಕ್ಷ ಕೃಷ್ಣಮೂರ್ತಿ ನಾಯ್ಕ ಐಸೂರು ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ ನ.೩೦ರಂದು ಸಂಜೆ ೫ ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಶ್ರೀ ಕ್ಷೇತ್ರ ಮಹಾಕಾಳಿ ಮಹಾಸಂಸ್ಥಾನ ನಿಪ್ಪಾಣಿಯ ಶ್ರೀ ಅರುಣಾನಂದ ತೀರ್ಥ ಸ್ವಾಮಿಜೀ ದಿವ್ಯ ಸಾನಿಧ್ಯ ವಹಿಸಲಿದ್ದು ಹಿರಿಯ ವಕೀಲ,ಕಾಂಗ್ರೆಸ್ ಮುಖಂಡ ಜಿ.ಟಿ.ನಾಯ್ಕ ಮಣಕಿನಗುಳಿ ಉದ್ಘಾಟಿಸುವರು. ಶಾಸಕ ಭೀಮಣ್ಣ ಟಿ.ನಾಯ್ಕ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಕರವೇ ಜನಧ್ವನಿ ಜಿಲ್ಲಾಧ್ಯಕ್ಷ ಉಮಾಕಾಂತ ಹೊಸಕಟ್ಟ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ, ಜೆಡಿಎಸ್ ಮುಖಂಡ ಉಪೇಂದ್ರ ಪೈ, ಬಿಜೆಪಿ ಮುಖಂಡ,ಉದ್ಯಮಿ ಕೃಷ್ಣ ಎಸಳೆ, ಜೀವಜಲ ಕಾರ್ಯಪಡೆ ಅಧ್ಯಕ್ಷ,ಉದ್ಯಮಿ ಶ್ರೀನಿವಾಸ ಹೆಬ್ಬಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಸಮಾಜ ಸೇವಕ, ಜಿಲ್ಲಾ ರೈತ ಸಂಘದ ಮಾಧ್ಯಮ ವಕ್ತಾರ ಇಲಿಯಾಸ್ ಇಬ್ರಾಹಿಂ ಸಾಬ್, ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ, ಸಾಮಾಜಿಕ ಮುಖಂಡ ದಿವಾಕರ ನಾಯ್ಕ ಹೆಮ್ಮನಬೈಲ್, ತಾಲೂಕ ಗ್ಯಾರೆಂಟಿ ಯೋಜನಾ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ವಿನಾಯಕ ಸೌ.ಕ್ರೆ.ಕೋಆಪ್ ಅಧ್ಯ÷ಕ್ಷ ಆನಂದ ಈರಾ ನಾಯ್ಕ ಪಾಲ್ಗೊಳ್ಳಲಿದ್ದು ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಮುಖ್ಯಸ್ಥರು ಅತಿಥಿಗಳಾಗಿ ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರನ್ನು, ಕಲಾವಿದರನ್ನು ಸನ್ಮಾನಿಸಲಾಗುವದು ಎಂದರು. ಸಿದ್ದಾಪುರ ಠಾಣೆಯ ಇನ್ಸ್ಪೆಕ್ಟರ್ ಸೀತಾರಾಮ್ ರವರು ಆಮಂತ್ರಣ ಬಿಡುಗಡೆಗೊಳಿಸಿ ಮಾತನಾಡಿ ಶುಭ ಕೋರಿದರು.















Comments