top of page

ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್

  • Writer: Ananthamurthy m Hegde
    Ananthamurthy m Hegde
  • Nov 19, 2024
  • 1 min read

ree

ಉಡುಪಿ: ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ.

ಸೋಮವಾರ ರಾತ್ರಿ ಐದು ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ಬಂದಿದ್ದ ವೇಳೆ ಎಎನ್‌ಎಫ್ ತಂಡ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಈ ವೇಳೆ ವಿಕ್ರಮ್ ಹತನಾಗಿದ್ದು, ಉಳಿದವರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ನಕ್ಸಲರು ಆಹಾರ ಸಾಮಗ್ರಿ ಖರೀದಿಗೆ ಬಂದಿದ್ದಾಗ ಎನ್‌ಕೌಂಟರ್ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ವಿಕ್ರಮ್ ಗೌಡ ಮೂಲತಃ ಹೆಬ್ರಿಯವನಾಗಿದ್ದು, ಶೃಂಗೇರಿ, ಕಾರ್ಕಳ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಎಂದೂ ಹೇಳಲಾಗಿದೆ.

ಕೇರಳದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಚುರುಕುಗೊಂಡ ಬಳಿಕ ನಕ್ಸಲರು ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶದತ್ತ ಮುಖಮಾಡಿದ್ದರು. ಉಳಿದ ನಕ್ಸಲರಿಗಾಗಿ ಶೋಧಕಾರ್ಯ ತೀವ್ರಗೊಂಡಿದೆ.

ಎನ್‌ಕೌAಟರ್ ನಡೆದ ಸ್ಥಳ ದಟ್ಟ ಅರಣ್ಯ ಪ್ರದೇಶವಾಗಿದ್ದು, ಕಬ್ಬಿನಾಲೆ ಬಸ್ ನಿಲ್ದಾಣದಿಂದ ಏಳು ಕಿ.ಮೀ. ದೂರದಲ್ಲಿದೆ.

ಕಾರ್ಕಳದ ಈ ಪ್ರದೇಶದಲ್ಲಿ ಈಚೆಗೆ ನಕ್ಸಲರು ಕಾಣಿಸಿಕೊಂಡಿರುವ ಬಗ್ಗೆ ವರದಿಯಾದ ಬಳಿಕ ನಕ್ಸಲ್ ನಿಗ್ರಹ ಪಡೆಯವರು ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಚುರುಕುಗೊಳಿಸಿದ್ದರು.

Comments


Top Stories

bottom of page