ನಟ ಅಲ್ಲೂ ಅರ್ಜುನ್ ಗೆ ಬಿಗ್ ರಿಲೀಫ್ !
- Ananthamurthy m Hegde
- Jan 4
- 1 min read
ಹೈದರಾಬಾದ್: ಹೈದರಾಬಾದ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ದೊರೆತಿದ್ದು, ಕೋರ್ಟ್ ನಿಂದ ರೆಗ್ಯುಲರ್ ಜಾಮೀನು ಮಂಜೂರಾಗಿದೆ.

ಪುಷ್ಪ 2 ಚಿತ್ರ ಪ್ರದರ್ಶನ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿ, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ಅಲ್ಲು ಅರ್ಜುನ್ ಗೆ ಇದೀಗ ಹೈದರಾಬಾದ್‌ನ ನಾಂಪಲ್ಲಿಯ 2ನೇ ಹೆಚ್ಚುವರಿ ಮೆಟ್ರೊಪಾಲಿಟಿನ್ ಸೆಷನ್ ನ್ಯಾಯಾಲಯ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ.
ವಾದ–ಪ್ರತಿವಾದಗಳನ್ನು ಆಲಿಸಿದ ನಾಂಪಲ್ಲಿಯ 2ನೇ ಹೆಚ್ಚುವರಿ ಮೆಟ್ರೊಪಾಲಿಟಿನ್ ಸೆಷನ್ ನ್ಯಾಯಾಲಯದ ನ್ಯಾಯಾದೀಶರು ನಟ ಅಲ್ಲು ಅರ್ಜುನ್ ಗೆ ಷರತ್ತು ಬದ್ಧ ನಿಯಮಿತ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
50,000 ರೂ ಬಾಂಡ್‌ನ ತಲಾ ಇಬ್ಬರ ಶ್ಯೂರಿಟಿಗಳನ್ನು ಒದಗಿಸಬೇಕು ಮತ್ತು ಅಲ್ಲು ಅರ್ಜು ನ್ ಅವರು ಇದೇ ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ಜಡ್ಜ್ ಆದೇಶಿಸಿದ್ದಾರೆ. ಈ ಮೂಲಕ ನಟ ಅಲ್ಲು ಅರ್ಜುನ್ ಸಧ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಏನಿದು ಪ್ರಕರಣ?
ಹೈದರಾಬಾದ್‌ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ ನಟ ಅಲ್ಲು ಅರ್ಜುನ್ ಮತ್ತು ಅವರ ಕುಟುಂಬ ಸಂಧ್ಯಾ ಥಿಯೇಟರ್ ಗೆ ಆಗಮಿಸಿತ್ತು. ನಟನನ್ನು ನೋಡಲು ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದರು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದರು.
ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು. ಅಲ್ಲು ಅರ್ಜುನ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ತೆಲಂಗಾಣ ಪೊಲೀಸರು ಆರೋಪಿಸಿದ್ದಾರೆ.
Comments