ನಟ ಸೈಫ್ ಅಲಿ ಖಾನ್ ಚೂರಿ ಇರಿತ : ಶಂಕಿತನ ಬಂಧನ
- Ananthamurthy m Hegde
- Jan 17
- 1 min read
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಆರೋಪಿಯನ್ನು ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಬಾಂದ್ರಾ ಪೊಲೀಸ್ ಠಾಣೆಗೆ ಶಂಕಿತ ವ್ಯಕ್ತಿಯನ್ನು ಪೊಲೀಸರು ಕರೆತರುತ್ತಿರುವುದು ಕಂಡು ಬಂದಿದ್ದು, ನಟನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದ ವ್ಯಕ್ತಿ ಈತನೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.
ಈ ವ್ಯಕ್ತಿಯನ್ನು ಪೊಲೀಸರಪು ಬಾಂದ್ಲಾ ರೈಲ್ವೇ ನಿಲ್ದಾಣದ ಬಳಿ ಬಂಧಿಸಿದ್ದು, ಘಟನೆ ಬಳಿಕ ತನ್ನ ಗುರ್ತಿಕೆ ಸಿಗಬಾರದು ಎಂದು ಎಂದು ಬಟ್ಟೆಯನ್ನು ಬದಲಿಸಿದ್ದ ಎಂದು ತಿಳಿದುಬಂದಿದೆ.
Comentários