top of page

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಹೈ ಕೋರ್ಟ್ ಆದೇಶವನ್ನು ಜಿಲ್ಲಾಡಳಿತ ಪಾಲಿಸಿದೆ : ರೋಷನ್

  • Writer: Ananthamurthy m Hegde
    Ananthamurthy m Hegde
  • Dec 11, 2024
  • 1 min read

ree

ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರದಲ್ಲಿ ಹೈಕೋರ್ಟ್ ಆದೇಶವನ್ನು ಜಿಲ್ಲಾಡಳಿತ ಚಾಚೂ ತಪ್ಪದೇ ಪಾಲಿಸಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು. ಸ್ವಾಮೀಜಿ ಅವರ ಜೊತೆಗೆ ನಾನು, ಪೊಲೀಸ್ ಕಮಿಷನರ್, ಎಸ್ಪಿ ಅವರು ಸುದೀರ್ಘವಾಗಿ ಚರ್ಚಿಸಿದ್ದೆವು. ಬೇರೆ ಜಾಗದಲ್ಲಿ ಪ್ರತಿಭಟನೆ ಮಾಡುವಂತೆ ತಿಳಿಸಿದ್ದೆವು. ಆದರೆ, ಅವರು ಕೊಂಡಸಕೊಪ್ಪದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದರು. ಹಾಗಾಗಿ, ಅಲ್ಲಿ ಪ್ರತಿಭಟನೆಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದ್ದೆವು. ಚಳಿಗಾಲದ ಅಧಿವೇಶನ ವೇಳೆ ಪ್ರತಿಭಟನೆ ನಡೆಸಬಹುದು. ಆದರೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾರಿಗೂ ತೊಂದರೆ ಆಗಬಾರದು. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು ಎನ್ನುವ ಕಾನೂನಿದೆ. ಹಾಗಾಗಿ, ಹೈಕೋರ್ಟ್ ಆದೇಶ ಮೀರಿ ಜಿಲ್ಲಾಡಳಿತ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಮರ್ಥಿಸಿಕೊಂಡರು.ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 70 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ ಎಂದು ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರು. 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾ ಸಮಾವೇಶ ನಡೆಸಿದ್ದ ಪಂಚಮಸಾಲಿಗರು ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವಂತೆ ಆಗ್ರಹಿಸಿದ್ದರು. ಮಧ್ಯಾಹ್ನದ ಬಳಿಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದಾಗ ಪರಿಸ್ಥಿತಿ ನಿಯಂತ್ರಣ ಕಳೆದುಕೊಂಡಿತ್ತು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು.

Comments


Top Stories

bottom of page