top of page

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಜ್ಜಿ ವಿಧಿವಶ

  • Writer: Ananthamurthy m Hegde
    Ananthamurthy m Hegde
  • Feb 13
  • 1 min read

ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿ ಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ.


ree

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು ಮುಂಜಾನೆ 4 ಗಂಟೆ ಸಮಯಕ್ಕೆ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಇದೀಗ ಇಬ್ಬರು ಮೊಮ್ಮಕ್ಕಳು ಓರ್ವ ಸೊಸೆಯನ್ನು ಅಗಲಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದರು. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳು ಕಂಠಪಾಟವಾಗಿದ್ದವು. ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.

ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮ ಗೌಡ ನೀಡಿರುವ ಕೊಡುಗೆ ಗುರುತಿಸಿ, 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿ ಸುಕ್ರಿ ಬೊಮ್ಮ ಗೌಡ ಅವರನ್ನು ಅರಸಿಕೊಂಡು ಬಂದಿವೆ.


 
 
 

Comments


Top Stories

bottom of page