ಬಾಕ್ಸಿಂಗ್ ಡೇ ಟೆಸ್ಟ್ ಸೋಲಿನ ನಂತರ ರೋಹಿತ್ ಶರ್ಮ ಹೇಳಿದ್ದೇನು ?
- Ananthamurthy m Hegde
- Dec 30, 2024
- 1 min read

ಮೆಲ್ಬರ್ನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡವು 184 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವು 2-1ರ ಮುನ್ನಡೆ ಸಾಧಿಸಿದೆ. ಇನ್ನು ಈ ಸೋಲಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸಿಗೆ ಬಲವಾದ ಪೆಟ್ಟು ಬಿದ್ದಿದೆ. ಈ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮನಬಿಚ್ಚಿ ಮಾತನಾಡಿದ್ದಾರೆ. 'ನಾನೀಗ ಎಲ್ಲಿದ್ದೆನೋ ಈಗಲೂ ಅಲ್ಲಿಯೇ ಇದ್ದೇನೆ. ಓರ್ವ ನಾಯಕನಾಗಿ ಹಾಗೂ ಆಟಗಾರನಾಗಿ ಈ ಬಾರಿ ನಾವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ನಮಗೆ ನಿರಾಸೆಯಿದೆ. ಇದು ನಮ್ಮ ಮನಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ. ಆದರೆ ಮುಂದಿನ ಪಂದ್ಯದಲ್ಲಿ ಒಂದು ತಂಡವಾಗಿ ಮುನ್ನಡೆಯಲು ಎದುರು ನೋಡುತ್ತಿದ್ದೇವೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
ಸಿಡ್ನಿಯಲ್ಲಿ ಒಂದು ತಂಡವಾಗಿ ನಾವು ಏನು ಮಾಡಲು ಕ್ಷಮತೆಯಿದೆಯೋ ಅದನ್ನು ಮಾಡಲು ನಾವು ಎದುರು ನೋಡುತ್ತಿದ್ದೇವೆ. ನಾವು ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಉತ್ತಮವಾಗಿ ಅಡಲು ಪ್ರಯತ್ನ ಪಡುತ್ತೇವೆ ಎಂದು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹೇಳಿದ್ದಾರೆ.
ಟೀಂ ಇಂಡಿಯಾ ಪರ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಮೆಲ್ಬರ್ನ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದರಾದರೂ ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ. ಈ ಬಗ್ಗೆ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, 'ಬುಮ್ರಾ ಅವರೊಬ್ಬ ಅದ್ಭುತ ಆಟಗಾರ. ನಾವು ಅವರನ್ನು ಸಾಕಷ್ಟು ವರ್ಷಗಳಿಂದ ನೋಡುತ್ತಾ ಬಂದಿದ್ದೇವೆ. ಅವರು ನಮ್ಮ ತಂಡಕ್ಕೆ ಸಾಕಷ್ಟು ಕೊಡುಗೆ ನೀಡುತ್ತಾ ಬಂದಿದ್ದಾರೆ. ಅವರು ನಮ್ಮ ತಂಡದ ಪರ ಹಾಗೂ ದೇಶದ ಪರ ಇನ್ನಷ್ಟು ವರ್ಷ ಆಡಲಿದ್ದಾರೆ' ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
Komentáre