ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಹೊರಡಿಸಿದೆ.
- Oct 21, 2024
- 1 min read
Updated: Oct 22, 2024
ಇಂದು ಬೆಳಗ್ಗೆ 06:45ಕ್ಕೆ ಹವಾಮಾನ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಕುರಿತು ಆರೆಂಜ್ ಅಲರ್ಟ್ ಹೊರಡಿಸಿದ್ದು, ಮುಂದಿನ ಮೂರು ಗಂಟೆಯಲ್ಲಿ ನಗರಾದ್ಯಂತ ಭಾರಿ ಮಳೆಯಾಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಬೆಂಗಳೂರು: ಮುಂಜಾನೆ ಬಿದ್ದ ಭಾರಿ ಮಳೆಗೆ ತತ್ತರಿಸಿ ಹೋಗಿರುವ ಸಿಲಿಕಾನ್ ಸಿಟಿ ಬೆಂಗಳೂರು ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದ್ದು, ಮುಂದಿನ ಮೂರು ಗಂಟೆಗಳಲ್ಲಿ ಮತ್ತೆ ಭಾರಿ ಮಳೆಯಾಗಲಿ ಎಂದು ಹೇಳಿದೆ.
ಇಂದು ಬೆಳಗ್ಗೆ 06:45ಕ್ಕೆ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಕುರಿತು ಆರೆಂಜ್ ಅಲರ್ಟ್ ಹೊರಡಿಸಿದ್ದು, ಮುಂದಿನ ಮೂರು ಗಂಟೆಯಲ್ಲಿ ನಗರಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹೇಳಿದೆ.
ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಅಲ್ಲದೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
Comments