ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣನ ಆರ್ಭಟ
- Ananthamurthy m Hegde
- 2 days ago
- 1 min read

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಭಾರಿ ಮಳೆಯಾಗಿದ್ದು, ರಾಜ್ಯದಲ್ಲಿ ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಮೇ ಮಧ್ಯಭಾಗದ ವಿಶಿಷ್ಟ ಹವಾಮಾನ ಬದಲಾವಣೆಗಳ ಆರಂಭಕ್ಕೆ ಮುನ್ನುಡಿ ಬರೆದಿದೆ.
ಭಾರತೀಯ ಹವಾಮಾನ ಇಲಾಖೆ ಈ ಹಿಂದೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ನೀಡಿತ್ತು.
ಬೇಸಿಗೆ ಮಳೆಯಿಂದ ಬಿಸಿಲು ಪ್ರದೇಶದ ಜಿಲ್ಲೆಗಳಲ್ಲಿ ಹಿತವಾದರೆ, ಕರಾವಳಿ, ಮಲೆನಾಡು, ಒಳನಾಡುಗಳಲ್ಲಿ ವಿವಿಧೆಡೆ ಬೆಳೆಗಳಿಗೆ ಹಾನಿಯಾಗಿದೆ. ಜೋರು ಗಾಳಿ ಮಳೆಗೆ ಬೆಳೆಗಳು ನೆಲಕಚ್ಚಿವೆ.
Comments