top of page

ಬುಡಕಟ್ಟು ವಿದ್ಯಾರ್ಥಿಗಳಿಗೆ ಶಾಲಾ ಪರಿಕರ ವಿತರಿಣೆ

  • Writer: Ananthamurthy m Hegde
    Ananthamurthy m Hegde
  • Jun 27
  • 1 min read

ಯಲ್ಲಾಪುರ: ಬುಡಕಟ್ಟು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಗತ್ತಿನ ಸವಾಲುಗಳನ್ನು ಎದುರಿಸುವ ಶಿಕ್ಷಣವನ್ನು ನೀಡಬೇಕಾದ ಅವಶ್ಯಕತೆಯಿದೆ ಎಂದು ಹಾಸಣಗಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆರ್.ಎನ್. ಹೆಗಡೆ, ಗೋರ್ಸಗದ್ದೆ ಹೇಳಿದರು.

ಅವರು ತಾಲೂಕಿನ ಹಾಸಣಗಿ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ರೋಟರಿ ಬೆಂಗಳೂರು ಹೈಗ್ರೌಂಡ್ಸ್ ಸಂಸ್ಥೆ ಹಾಗೂ ಸ್ಕೊಡ್‌ವೆಸ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ. ಕಾರ್ಯಕ್ರಮದಲ್ಲಿ ಬುಡಕಟ್ಟು ಮಕ್ಕಳಿಗೆ ಶಾಲಾ ಪರಿಕರ ವಿತರಿಸಿ ಮಾತನಾಡಿದರು.‌

ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

ಸ್ಕೊಡ್‌ವೆಸ್ ಸಂಸ್ಥೆಯ ಮುಖ್ಯ ಹಣಕಾಸು ಹಾಗೂ ಆಡಳಿತಾಧಿಕಾರಿ ಸರಸ್ವತಿ ಎನ್. ರವಿ ಮಾತನಾಡಿದರು. ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಡಾ. ನಾರಾಯಣ ಹೆಗಡೆ, ಯೋಜನಾಧಿಕಾರಿ ಪ್ರಶಾಂತ ನಾಯಕ, ಶಿರನಾಲಾ, ಬಿಳಕಿ, ಕೆರೆಹೊಸಳ್ಳಿ, ಇಳೇಹಳ್ಳಿ, ಮಂಚಿಕೇರಿ ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

ಉಮ್ಮಚಗಿ, ಮಂಚಿಕೇರಿ, ಹಾಸಣಗಿ ಸುತ್ತಮುತ್ತಲಿನ ನೂರಕ್ಕಿಂತ ಹೆಚ್ಚಿನ ಬುಡಕಟ್ಟು ಹಾಗೂ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಛತ್ರಿ ಹಾಗೂ ಶಾಲಾ ಪರಿಕರಗಳನ್ನು ವಿತರಿಸಲಾಯಿತು.

Comentarios


Top Stories

bottom of page