top of page

ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ!

  • Writer: Ananthamurthy m Hegde
    Ananthamurthy m Hegde
  • Jan 3
  • 1 min read
ree

ರಾಜ್ಯ ಸರ್ಕಾರ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

‘ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ’ ಎಂದು ಎಕ್ಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.


ಒಟ್ಟು 4474 ಅರ್ಜಿಗಳು ಸಲ್ಲಿಕೆ

ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಬಿಡುಗಡೆಯಾದ ಅನುದಾನ ವಿವರವನ್ನು ಸರ್ಕಾರ ಹಂಚಿಕೊಂಡಿದೆ. 2023-24 ನೇ ಸಾಲಿನಲ್ಲಿ ಒಟ್ಟು 4474 ಅರ್ಜಿಗಳು ಸಲ್ಲಿಕೆಯಾಗಿದ್ದು, ಶಿಷ್ಯವೇತನ ಪಾವತಿಸ ಬಹುದಾದ ಅರ್ಹ ಅರ್ಜಿಗಳ ಸಂಖ್ಯೆ 3958 ಎಂದು ತಿಳಿಸಿದೆ. 2024ರ ಮಾರ್ಚ್ ಅಂತ್ಯಕ್ಕೆ 1737 ಅರ್ಜಿಗಳಿಗೆ ಸಂಬಂಧಿಸಿದಂತೆ 2.41 ಕೋಟಿ ರೂಪಾಯಿ ಶಿಷ್ಯವೇತನ ಬಿಡುಗಡೆ ಮಾಡಲಾಗುತ್ತು. ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ & ಮಂಡಳಿಯು ಖಜಾನೆ ಮುಖಾಂತರ ಶಿಷ್ಯವೇತನ ಬಿಡುಗಡೆ ಮಾಡಬೇಕಾದ ಹಿನ್ನಲೆಯಲ್ಲಿ ಸದರಿ ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಡಿಸೆಂಬರ್ 2024ರ ಮಾಹೆಯಲ್ಲಿ ಬಾಕಿ ಉಳಿದ 2221 ಅರ್ಜಿಗಳನ್ನು ಪರಿಗಣಿಸಿ, 3.44 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಒಟ್ಟಾರೆಯಾಗಿ 2023-24ನೇ ಸಾಲಿನಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮ೦ಡಳಿಯ ಸಾಂದೀಪನಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆ ಮಾಡಲಾಗಿದೆ.

Comments


Top Stories

bottom of page